ETV Bharat / sports

ರಾಜಸ್ಥಾನ-ಪಂಜಾಬ್ ನಡುವೆ ಬಿಗ್ ಫೈಟ್: ಉಭಯ ತಂಡಗಳಿಗೂ ಮಾಡು ಇಲ್ಲವೆ ಮಡಿ ಪಂದ್ಯ

ಲೀಗ್ ಹಂತದ ಐಪಿಎಲ್ ಪಂದ್ಯಗಳು ಕೊನೆಯ ಹಂತಕ್ಕೆ ಬಂದಂತೆ ನಾಕ್​ಔಟ್​ ಹಂತಕ್ಕೆ ಯಾವ ತಂಡಗಳು ತಲುಪಲಿವೆ​ ಎಂಬ ಕುತೂಹಲ ಹೆಚ್ಚಾಗುತ್ತಿದೆ. ಅಬುಧಾಬಿಯಲ್ಲಿ ಇಂದು ಪಂಜಾಬ್ ಮತ್ತು ರಾಜಸ್ಥಾನ ತಂಡಗಳು ಮುಖಾಮುಖಿಯಾಗುತ್ತಿದ್ದು, ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದೆ.

rajasthan royals vs kings xi punjab
ರಾಜಸ್ಥಾನ - ಪಂಜಾಬ್
author img

By

Published : Oct 30, 2020, 10:33 AM IST

ಅಬುಧಾಬಿ: ಸತತ ಐದು ಗೆಲುವಿನೊಂದಿಗೆ ಪ್ಲೇ ಆಫ್​ ಆಸೆ ಜೀವಂತವಾಗಿರಿಸಿಕೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಇಂಡಿಯನ್ ಪ್ರೀಮಿಯರ್ ಲೀಗ್​ನ 50ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣಸಾಡಲಿದೆ.

ಅಂತಿಮ ನಾಲ್ಕರ ಹಂತದಲ್ಲಿ ಸ್ಥಾನ ಪಡೆಯುವ ಆಸೆ ಹೊಂದಿರುವ ಉಭಯ ತಂಡಗಳಿಗೆ ಇದು ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ. 12 ಪಂದ್ಯಗಳಿಂದ 12 ಅಂಕ ಹೊಂದಿರುವ ಪಂಜಾಬ್ ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ನ್ಥಾನದಲ್ಲಿದೆ. ಇತ್ತ ರಾಜಸ್ಥಾನ ತಂಡ 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿದೆ.

rajasthan royals vs kings xi punjab
ಕಿಂಗ್ಸ್ ಇಲೆವೆನ್ ಪಂಜಾಬ್

ಸತತ 5 ಸೋಲುಗಳ ಬಳಿಕ ಸತತ 5 ಪಂದ್ಯ ಗೆದ್ದಿರುವ ಪಂಜಾಬ್ ಗೆಲುವಿನ ಲಯ ಮುಂದುವರಿಸುವ ವಿಶ್ವಾಸದಲ್ಲಿದೆ. ಕಳೆದ ಪಂದ್ಯದಲ್ಲಿ ಕೆಕೆಆರ್ ಎದುರು ಪಂಜಾಬ್ ಸುಲಭದ ಜಯ ದಾಖಲಿಸಿತ್ತು. ಕ್ರಿಸ್ ಗೇಲ್ 11ರ ಬಳಗದಲ್ಲಿ ಸ್ಥಾನ ಪಡೆದ ನಂತರ ತಂಡದ ಅದೃಷ್ಟವೇ ಬದಲಾಗಿದೆ. ಮಯಾಂಕ್ ಅಗರ್ವಾಲ್ ಅಲಭ್ಯತೆಯಲ್ಲಿ ಮಂದೀಪ್ ಸಿಂಗ್ ಉತ್ತಮ ಪ್ರದರ್ಶನ ತೋರಿದ್ದಾರೆ.

ಮೊಹಮ್ಮದ್‌ ಶಮಿ ಮತ್ತು ರವಿ ಬಿಷ್ಣೋಯಿ, ಎಂ.ಅಶ್ವಿನ್, ಅರ್ಷ್​ದೀಪ್ ಸಿಂಗ್, ಕ್ರಿಸ್ ಜೋರ್ಡನ್ ಬೌಲಿಂಗ್​ನಲ್ಲಿ ಕಮಾಲ್ ಮಾಡುತ್ತಿದ್ದು, ಪಂಜಾಬ್​ಗೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾಗಿದ್ದಾರೆ.

ಇತ್ತ ಬಲಿಷ್ಠ ಆಟಗಾರರನ್ನು ಹೊಂದಿದ್ದರೂ ನೀರಸ ಪ್ರದರ್ಶನದಿಂದಾಗಿ ರಾಜಸ್ಥಾನ ತಂಡ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಪ್ಲೇ ಆಫ್ ಹಂತಕ್ಕೇರಲು ಕೂದಲೆಳೆ ಅಂತರದ ಅವಕಾಶ ಹೊಂದಿದೆ. ರಾಜಸ್ಥಾನ ಕಳೆದ ಪಂದ್ಯದಲ್ಲಿ ಮುಂಬೈ ಎದುರು ಭರ್ಜರಿ ಜಯ ದಾಖಲಿಸಿತ್ತು. ಬೆನ್ ಸ್ಟೋಕ್ಸ್ ಹಾಗೂ ಸಂಜು ಸ್ಯಾಮನ್ಸ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು.

rajasthan royals vs kings xi punjab
ರಾಜಸ್ಥಾನ ರಾಯಲ್ಸ್

ಇಂದಿನ ಪಂದ್ಯ ರಾಜಸ್ಥಾನ ತಂಡಕ್ಕೆ ಬಹು ಮುಖ್ಯವಾಗಿದೆ. ಒಂದು ವೇಳೆ ಸೋತರೆ ಟೂರ್ನಿಯಿಂದ ಹೊರ ಬೀಳುವುದು ಬಹುತೇಕ ಖಚಿತವಾಗಿದೆ. ಬೌಲಿಂಗ್​ನಲ್ಲಿ ರಾಯಲ್ಸ್ ಉತ್ತಮ ಪ್ರದರ್ಶನ ತೋರಿದೆ. ಜೋಫ್ರಾ ಆರ್ಚರ್​, ಶ್ರೇಯಸ್ ಗೋಪಾಲ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ ಉತ್ತಮವಾಗಿ ಸ್ಪೆಲ್ ಮಾಡುತ್ತಿದ್ದಾರೆ.

ಇದುವರೆಗೂ ಉಭಯ ತಂಡಗಳು 20 ಬಾರಿ ಮುಖಾಮುಖಿಯಾಗಿದ್ದು, 11 ಪಂದ್ಯಗಳಲ್ಲಿ ರಾಜಸ್ಥಾನ ಗೆಲುವು ಸಾಧಿಸಿದ್ರೆ, 9 ಪಂದ್ಯಗಳಲ್ಲಿ ಪಂಜಾಬ್ ಜಯದ ನಗೆ ಬೀರಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.