ದುಬೈ: ಇಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಡಲಿದೆ.
ವಿರಾಟ್ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡ ಆಡಿದ 9 ಪಂದ್ಯಗಳ ಪೈಕಿ 6ರಲ್ಲಿ ಜಯ ಗಳಿಸಿದ್ದು, 3 ಪಂದ್ಯಗಳನ್ನು ಕೈಚೆಲ್ಲಿದೆ. ದಿನೇಶ್ ಕಾರ್ತಿಕ್ ನೇತೃತ್ವದ ಕೆಕೆಆರ್ ತಂಡ ಆಡಿದ 9 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಜಯಗಳಿಸಿದ್ರೆ, 4 ಪಂದ್ಯಗಳಲ್ಲಿ ಸೋಲು ಕಂಡಿದೆ.
ಬ್ಯಾಟಿಂಗ್, ಬೌಲಿಂಗ್‌ನಲ್ಲಿ ಆರ್‌ಸಿಬಿ ಬಲಿಷ್ಠವಾಗಿದೆ. ಆರಂಭಿಕ ಆಟಗಾರರಾದ ದೇವದತ್ ಪಡಿಕ್ಕಲ್, ಫಿಂಚ್, ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕ್ರಿಸ್ ಮೋರಿಸ್ ಹೊಸ ಭರವಸೆ ಮೂಡಿಸಿದ್ದಾರೆ.
ಬೌಲಿಂಗ್‌ಲ್ಲೂ ಬೆಂಗಳೂರು ಬಲಿಷ್ಠವಾಗಿದ್ದು, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಹಾಲ್ ಸ್ಪಿನ್ ವರ್ಕೌಟ್ ಆಗುತ್ತಿದೆ. ಸೈನಿ, ಉದಾನ ಉತ್ತಮವಾಗಿ ಸ್ಪೆಲ್ ಮಾಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವೇಗಿ ಕ್ರಿಸ್ ಮೋರಿಸ್ ಬೆಂಗಳೂರು ತಂಡದ ಬೌಲಿಂಗ್ನ ಶಕ್ತಿಯಾಗಿದ್ದಾರೆ.
ಇತ್ತ ಕೆಕೆಆರ್ ತಂಡ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದು, ಬಲಿಷ್ಠ ತಂಡಗಳ ವಿರುದ್ಧ ಗೆಲುವು ಸಾಧಿಸಿದೆ. ಕಳೆದ ಪಂದ್ಯದಲ್ಲಿ ಶುಬ್ಮನ್ ಗಿಲ್, ನಿತೀಶ್ ರಾಣ, ತ್ರಿಪಾಠಿ, ಮಾರ್ಗನ್, ದಿನೇಶ್ ಕಾರ್ತಿಕ್ ಉತ್ತಮವಾಗಿ ಬ್ಯಾಟ್ ಬೀಸಿದ್ದರು. ಆದರೆ ಕೆರಿಬಿಯನ್ ಆಲ್ರೌಂಡರ್ ರಸೆಲ್ ಮಾತ್ರ ಬ್ಯಾಟಿಂಗ್ನಲ್ಲಿ ಮಿಂಚುತ್ತಿಲ್ಲ.
ಕಳೆದ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದ ಕಿವೀಸ್ ವೇಗಿ ಲೂಕಿ ಫರ್ಗ್ಯುಸನ್ ಕೆಕೆಆರ್ಗೆ ಹೊಸ ಭರವಸೆ ಮೂಡಿಸಿದ್ದಾರೆ. ಪ್ಯಾಟ್ ಕಮ್ಮಿನ್ಸ್, ರಸೆಲ್, ಕಮಲೇಶ್ ನಾಗರಕೋಟಿ, ವರುಣ್ ಚಕ್ರವರ್ತಿ, ಪ್ರಸೀದ್ ಕೃಷ್ಣ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ.
ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೆ ಬೆಂಗಳೂರು ಮತ್ತು ಕೋಲ್ಕತ್ತಾ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಕೆಕೆಆರ್ ತಂಡ 15ರಲ್ಲಿ ಗೆಲುವು ದಾಖಲಿಸಿದ್ರೆ, ಆರ್‌ಸಿಬಿ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ.