ಅಬುಧಾಬಿ: ಇಂದು ನಡೆಯಲಿರುವ ದ್ವಿತೀಯ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ರಾಜಸ್ಥಾನ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಮುಂಬೈ ತಂಡ ಇಲ್ಲಿಯವರೆಗೆ ಒಟ್ಟು 10 ಪಂದ್ಯಗಳನ್ನಾಡಿದ್ದು, 7 ಪಂದ್ಯಗಳಲ್ಲಿ ಗೆಲುವು ಕಂಡಿದ್ರೆ, 3 ಪಂದ್ಯಗಳಲ್ಲಿ ಸೋತಿದೆ. ಇತ್ತ ರಾಜಸ್ಥಾನ ತಂಡ ಆಡಿರುವ 11 ಪಂದ್ಯಗಳ ಪೈಕಿ 4 ಪಂದ್ಯ ಜಯಿಸಿದ್ರೆ, 7ರಲ್ಲಿ ಸೋಲು ಕಂಡಿದೆ.
ಬ್ಯಾಟಿಂಗ್ ವೈಫಲ್ಯದಿಂದಾಗಿ ರಾಜಸ್ಥಾನ ತಂಡ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರುತ್ತಿದೆ. ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಸ್ಟೋಕ್ಸ್ ಮತ್ತು ಉತ್ತಪ್ಪ ಉತ್ತಮ ಬಿಗ್ ಸ್ಕೋರ್ ಕಲೆಹಾಕುತ್ತಿಲ್ಲ. ಇತ್ತ ಸಾಮ್ಸನ್ ಪೈಫಲ್ಯ ದೊಡ್ಡ ಹಿನ್ನಡೆಯಾಗಿದೆ. ನಾಯಕ ಸ್ಟೀವ್ ಸ್ಮಿತ್ ಮತ್ತು ಬಟ್ಲರ್ ಕೆಲ ಪಂದ್ಯಗಳಲ್ಲಿ ಮಿಂಚಿದ್ದಾರೆ.
ಬೌಲಿಂಗ್ನಲ್ಲಿ ರಾಯಲ್ಸ್ ಉತ್ತಮ ಪ್ರದರ್ಶನ ತೋರಿದೆ ಜೋಫ್ರಾ ಆರ್ಚರ್, ಶ್ರೇಯಸ್ ಗೋಪಾಲ್, ರಾಹುಲ್ ತೆವಾಟಿಯಾ, ಕಾರ್ತಿಕ್ ತ್ಯಾಗಿ ಉತ್ತಮವಾಗಿ ಸ್ಪೆಲ್ ಮಾಡುತ್ತಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದ ಮುಂಬೈ ತಂಡ ಬ್ಯಾಟಿಂಗ್, ಬೌಲಿಂಗ್ ಎರಡರಲ್ಲೂ ಬಲಿಷ್ಠವಾಗಿದೆ. ಬಹುತೇಕ ಬ್ಯಾಟ್ಸ್‌ಮನ್‌ಗಳು ಉತ್ತಮ ಫಾರ್ಮ್‌ನಲ್ಲಿದ್ದು, ತಂಡಕ್ಕೆ ನೆರವಾಗುತ್ತಿದ್ದಾರೆ. ಡಿ ಕಾಕ್, ರೋಹಿತ್, ಸೂರ್ಯಕುಮಾರ್ ಯಾದವ್, ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್ ಮುಂಬೈನ ಬ್ಯಾಟಿಂಗ್ ಬಲ.
ಬೌಲಿಂಗ್ನಲ್ಲೂ ಮುಂಬೈ ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ, ಟ್ರೆಂಟ್ ಬೌಲ್ಟ್, ಜೇಮ್ಸ್ ಪ್ಯಾಟಿನ್ಸನ್, ರಾಹುಲ್ ಚಹಾರ್ ಅದ್ಭುತವಾಗಿ ಸ್ಪೆಲ್ ಮಾಡುತ್ತಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ ಮುಂಬೈ ಮತ್ತು ರಾಜಸ್ಥಾನ್ ತಂಡ ಇಲ್ಲಿಯವರೆಗೆ 21 ಬಾರಿ ಮುಖಾಮುಖಿಯಾಗಿದ್ದು, ಮುಂಬೈ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ, ರಾಜಸ್ಥಾನ್ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.