ಹೈದರಾಬಾದ್: ಗುರುವಾರ ನಡೆದ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 48 ರನ್ಗಳಿಂದ ಭರ್ಜರಿ ಜಯ ಸಾಧಿಸಿದೆ. ಪಂದ್ಯದ ವೇಳೆ ರೋಹಿತ್ ಶರ್ಮಾ ಪುತ್ರಿ, ಮುಂಬೈ ತಂಡವನ್ನು ಹುರಿದುಂಬಿಸುತ್ತಿರುವ ಫೋಟೋ ವೈರಲ್ ಆಗಿದೆ.
ಪಂದ್ಯದ ಸಮಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಮುದ್ದಾದ ಫೋಟೋವನ್ನು ಹಂಚಿಕೊಂಡಿದೆ. ಈ ಫೋಟೋದಲ್ಲಿ ರೋಹಿತ್ ಶರ್ಮಾ ಅವರ ಪುತ್ರಿ ಸಮೈರಾ ಶರ್ಮಾ, ತಂದೆಯನ್ನು ಹುರಿದುಂಬಿಸುತ್ತಿದ್ದಾಳೆ. ಪುಟ್ಟ ಬಾಲಕಿ ತನ್ನ ಕೈಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ಧ್ವಜ ಹಿಡಿದಿರುವುದನ್ನು ಕಾಣಬಹುದು.
- " class="align-text-top noRightClick twitterSection" data="
">
ವಿಶೇಷವೆಂದರೆ, ಈ ಪಂದ್ಯದಲ್ಲಿ ರೋಹಿತ್ ಉತ್ತಮ ಪ್ರದರ್ಶನ ನೀಡಿದ್ದಾರೆ. 45 ಎಸೆತಗಳಲ್ಲಿ ಎಂಟು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ನೆರವಿನಿಂದ 70 ರನ್ ಗಳಿಸಿ, ಅಲ್ಪ ಮೊತ್ತಕ್ಕೆ ಕುಸಿಯುತ್ತಿದ್ದ ತಂಡವನ್ನು ಮೇಲಕ್ಕೆತ್ತಿದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ತಂಡ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 191 ರನ್ ಪೇರಿಸಿತು. ಮರುತ್ತರವಾಗಿ ಬ್ಯಾಟಿಂಗ್ ನಡೆಸಿದ ಪಂಜಾಬ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 143 ರನ್ ಗಳಿಸಿ 48 ರನ್ಗಳಿಂದ ರೋಹಿತ್ ಪಡೆಗೆ ಶರಣಾಯಿತು.