ಅಬುಧಾಬಿ: ಇಂದು ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಐಪಿಎಲ್‍ನಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿವೆ. ಅಬುಧಾಬಿಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್ಆರ್ ಮತ್ತು ಆರ್ಸಿಬಿ ತಂಡಗಳು ಸೆಣಸಾಡಲಿವೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯ ಗೆದ್ದಿರುವ ಬೆಂಗಳೂರು ತಂಡ ಉತ್ತಮ ಸ್ಥಿತಿಯಲ್ಲಿದೆ. ರಾಜಸ್ಥಾನ ಕೂಡ ಆಡಿರುವ 3 ಪಂದ್ಯಗಳಲ್ಲಿ ಎರಡಲ್ಲಿ ಗೆಲುವು ಸಾಧಿಸಿದ್ದು, ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಸೋಲು ಕಂಡಿತ್ತು.
![Royal Challengers Bangalore vs Rajasthan Royals](https://etvbharatimages.akamaized.net/etvbharat/prod-images/9032280_thumm.jpg)
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು 21 ಬಾರಿ ಮುಖಾಮುಖಿಯಾಗಿದ್ದು, 10 ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್ ಜಯ ಗಳಿಸಿದ್ರೆ, 8 ಪಂದ್ಯಗಳಲ್ಲಿ ಆರ್ಸಿಬಿ ಗೆಲುವು ಕಂಡಿದ್ದು, ಮೂರು ಪಂದ್ಯಗಳು ಫಲಿತಾಂಶ ಕಂಡಿಲ್ಲ.
ಬಲಿಷ್ಠ ಬ್ಯಾಟಿಂಗ್ ಲೈನಪ್ ಹೊಂದಿರುವ ಆರ್ಸಿಬಿ ತಂಡಕ್ಕೆ ಅನುಭವಿ ಆಟಗಾರ ಫಿಂಚ್, ನಾಯಕ ವಿರಾಟ್ ಕೊಹ್ಲಿ ಮತ್ತು ಎಬಿಡಿ ವಿಲಿಯರ್ಸ್ ಶಕ್ತಿಯಾಗಿದ್ದಾರೆ. ಕನ್ನಡಿಗ ದೇವದತ್ ಪಡಿಕ್ಕಲ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು, ಆರ್ಸಿಬಿ ಬಲ ಹೆಚ್ಚಿಸಿದೆ. ಕಳೆದ ಪಂದ್ಯದಲ್ಲಿ ಶಿವಂ ದುಬೆ ಮಿಂಚಿದ್ದು, ಬಿಗ್ ಹಿಟ್ಟಿಂಗ್ ಮೂಲಕ ಬೆಂಗಳೂರು ತಂಡಕ್ಕೆ ಕೊಡುಗೆ ನೀಡಬಲ್ಲರು.
![Royal Challengers Bangalore vs Rajasthan Royals](https://etvbharatimages.akamaized.net/etvbharat/prod-images/9032280_thum.jpg)
ಆದರೆ ಆರ್ಸಿಬಿ ಬೌಲಿಂಗ್‍ನಲ್ಲಿ ಕೊಂಚ ಸುಧಾರಿಸಬೇಕಿದೆ. ಡೆತ್ ಓವರ್ನಲ್ಲಿ ಬೌಲರ್ಗಳು ಉತ್ತಮ ಪ್ರದರ್ಶನ ತೋರುವ ಅಗತ್ಯವಿದೆ. ಸೈನಿ ಮತ್ತು ಉದಾನ ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿದ್ರು. ಜೊತೆಗೆ ಚಹಾಲ್ ಮತ್ತು ವಾಷಿಂಗ್ಟನ್ ಸ್ಪಿನ್ ಬೌಲಿಂಗ್ ವರ್ಕ್ ಆಗುತ್ತಿದೆ.
![Royal Challengers Bangalore vs Rajasthan Royals](https://etvbharatimages.akamaized.net/etvbharat/prod-images/9032280_thmm.jpg)
ರಾಜಸ್ಥಾನ ರಾಯಲ್ಸ್ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ನಿಡಿದೆ. ನಾಯಕ ಸ್ಮಿತ್, ಬಟ್ಲರ್, ಸಂಜು ಸ್ಯಾಮ್ಸನ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಜೋಫ್ರಾ ಆರ್ಚರ್, ಟಾಮ್ ಕರ್ರನ್, ರಾಹುಲ್ ತೆವಾಟಿಯಾ ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ.