ಶಾರ್ಜಾ: ಪ್ಲೇ ಆಫ್ ಪ್ರವೇಶಿಸಲು ನಿರ್ಣಾಯಕವಾಗಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಚೇಸಿಂಗ್ ಮಾಡಲು ನಿರ್ಧರಿಸಿದ್ದಾರೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಆಡಿರುವ 12 ಪಂದ್ಯಗಳಲ್ಲಿ 5 ಗೆಲುವು ಮತ್ತು 7 ಸೋಲುಗಳೊಂದಿಗೆ 10 ಅಂಕ ಪಡೆದುಕೊಂಡಿವೆ. ಈ ಪಂದ್ಯವನ್ನು ಗೆದ್ದ ತಂಡ 5ನೇ ಸ್ಥಾನಕ್ಕೇರಲಿದೆ.
5 ಬಾರಿ ಚಾಂಪಿಯನ್ ಮುಂಬೈ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕಳೆದ ಪಂದ್ಯದಲ್ಲಿ ಇದೇ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕಡಿಮೆ ಮೊತ್ತದ ಟಾರ್ಗೆಟ್ ನೀಡಿಯೂ ಪ್ರಬಲ ಪೈಪೋಟಿ ನೀಡಿ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ತಂಡ ವಿಕೆಟ್ ಕೀಪರ್ ಕ್ವಿಂಟನ್ ಡಿಕಾಕ್ ಬದಲಿಗೆ ಇಶಾನ್ ಕಿಶನ್ ಮತ್ತು ಕೃನಾಲ್ ಪಾಂಡ್ಯ ಬದಲಿಗೆ ಜಿಮ್ಮಿ ನೀಶಮ್ಗೆ ತಂಡದಲ್ಲಿ ಅವಕಾಶ ನೀಡಿದೆ.
-
🚨 Toss Update from Sharjah 🚨@mipaltan have won the toss & elected to bowl against @rajasthanroyals. #VIVOIPL #RRvMI
— IndianPremierLeague (@IPL) October 5, 2021 " class="align-text-top noRightClick twitterSection" data="
Follow the match 👉 https://t.co/0oo7MLqMNC pic.twitter.com/ZEbkQxZx0z
">🚨 Toss Update from Sharjah 🚨@mipaltan have won the toss & elected to bowl against @rajasthanroyals. #VIVOIPL #RRvMI
— IndianPremierLeague (@IPL) October 5, 2021
Follow the match 👉 https://t.co/0oo7MLqMNC pic.twitter.com/ZEbkQxZx0z🚨 Toss Update from Sharjah 🚨@mipaltan have won the toss & elected to bowl against @rajasthanroyals. #VIVOIPL #RRvMI
— IndianPremierLeague (@IPL) October 5, 2021
Follow the match 👉 https://t.co/0oo7MLqMNC pic.twitter.com/ZEbkQxZx0z
ತನ್ನ ಕೊನೆಯ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ರಾಜಸ್ಥಾನ್ ರಾಯಲ್ಸ್ ಈ ಪಂದ್ಯದಲ್ಲಿ 2 ಬದಲಾವಣೆ ಮಾಡಿಕೊಂಡಿದೆ. ಮಯಾಂಕ್ ಮರ್ಕಂಡೆ ಬದಲಿಗೆ ಕನ್ನಡಿಗ ಶ್ರೇಯಸ್ ಗೋಪಾಲ್ ಮತ್ತು ಆಕಾಶ್ ಸಿಂಗ್ ಬದಲಿಗೆ ಕುಲ್ದೀಪ್ ಯಾದವ್ಗೆ ಅವಕಾಶ ನೀಡಿದೆ.
ಮುಖಾಮುಖಿ:
ಐಪಿಎಲ್ನಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಮುಂಬೈ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮಾತ್ರ ಹೇಳಿಕೊಳ್ಳುವ ದಾಖಲೆ ಹೊಂದಿಲ್ಲ. ಆಡಿರುವ 23 ಪಂದ್ಯಗಳಲ್ಲಿ ಮುಂಬೈ 12 ಮತ್ತು ರಾಜಸ್ಥಾನ್ ತಂಡ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
ಸಂಭಾವ್ಯ ಮುಂಬೈ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೀ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲ್ಲಾರ್ಡ್, ಜಿಮ್ಮಿ ನೀಶಮ್, ನೇಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್
ರಾಜಸ್ಥಾನ್ ಸಂಭಾವ್ಯ ತಂಡ: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೀ), ಶಿವಂ ದುಬೆ, ಗ್ಲೇನ್ ಫಿಲಿಪ್ಸ್, ಡೇವಿಡ್ ಮಿಲ್ಲರ್, ರಾಹುಲ್ ತೇವಾಟಿಯಾ, ಕುಲ್ದೀಪ್ ಯಾದವ್, ಶ್ರೇಯಸ್ ಗೋಪಾಲ್, ಚೇತನ್ ಸಕಾರಿಯಾ, ಮುಸ್ತಫಿಜುರ್ ರೆಹಮಾನ್
ಇದನ್ನು ಓದಿ:IPL, ಟಿ-20 ವಿಶ್ವಕಪ್ನಿಂದ ಹೊರಬಿದ್ದ ಇಂಗ್ಲೆಂಡ್ ಆಲ್ರೌಂಡರ್ ಸ್ಯಾಮ್ ಕರ್ರನ್