ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಕಳೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತಕಾರಿ ಸೋಲುಣಿಸಿದ ವಿಶ್ವಾಸದಲ್ಲಿರುವ ಬೆಂಗಳೂರು ತಂಡ ಇಂದಿನ ಪಂದ್ಯವನ್ನು ಗೆದ್ದು ಪ್ಲೇ ಆಫ್ಗೆ ಮತ್ತಷ್ಟು ಹತ್ತಿರವಾಗುವ ಆಶಯದಲ್ಲಿದೆ.
ಇತ್ತ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ ಆಫ್ ರೇಸ್ನಲ್ಲಿ ಉಳಿದುಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ರಾಯಲ್ಸ್ ಆಡಿರುವ ಆಡಿರುವ 10 ಪಂದ್ಯಗಳಲ್ಲಿ 4 ಗೆಲುವು ಮತ್ತು 8 ಸೋಲು ಕಂಡು 7ನೇ ಸ್ಥಾನದಲ್ಲಿದೆ. ಈ ಪಂದ್ಯ ಗೆದ್ದರಷ್ಟೇ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿದುಕೊಳ್ಳಲಿದೆ.
-
🚨 Toss Update 🚨@imVkohli has won the toss & @RCBTweets have elected to bowl against @rajasthanroyals. #VIVOIPL #RRvRCB
— IndianPremierLeague (@IPL) September 29, 2021 " class="align-text-top noRightClick twitterSection" data="
Follow the match 👉 https://t.co/4IK9cxdt1G pic.twitter.com/ymT7MIHYA0
">🚨 Toss Update 🚨@imVkohli has won the toss & @RCBTweets have elected to bowl against @rajasthanroyals. #VIVOIPL #RRvRCB
— IndianPremierLeague (@IPL) September 29, 2021
Follow the match 👉 https://t.co/4IK9cxdt1G pic.twitter.com/ymT7MIHYA0🚨 Toss Update 🚨@imVkohli has won the toss & @RCBTweets have elected to bowl against @rajasthanroyals. #VIVOIPL #RRvRCB
— IndianPremierLeague (@IPL) September 29, 2021
Follow the match 👉 https://t.co/4IK9cxdt1G pic.twitter.com/ymT7MIHYA0
ಆರ್‌ಸಿಬಿ ಪರ ಇಂಗ್ಲೆಂಡ್ ಪೇಸರ್ ಜಾರ್ಜ್ ಗಾರ್ಟನ್ ಐಪಿಎಲ್ಗೆ ಪದಾರ್ಪಣೆ ಮಾಡಲಿದ್ದಾರೆ. ರಾಯಲ್ಸ್ ಪರ ಜಯದೇವ್ ಉನಾದ್ಕಟ್ ಬದಲಿಗೆ ಕಾರ್ತಿಕ್ ತ್ಯಾಗಿ ತಂಡಕ್ಕೆ ಕಮ್ಬ್ಯಾಕ್ ಮಾಡಲಿದ್ದಾರೆ.
ರಾಜಸ್ಥಾನ ರಾಯಲ್ಸ್: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿಕೀ), ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲೊಮ್ರೋರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಶ್ರೀಕಾರ್ ಭರತ್ (ವಿಕೀ), ಗ್ಲೇನ್ ಮ್ಯಾಕ್ಸ್ ವೆಲ್, ಎಬಿ ಡಿ ವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಶಹಬಾಜ್ ಅಹಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್