ಮುಂಬೈ: ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ.ಎಲ್.ರಾಹುಲ್ ಮಂಗಳವಾರ ಆರ್ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಟಿ20 ಕ್ರಿಕೆಟ್ನಲ್ಲಿ 6,000 ರನ್ ಪೂರೈಸಿದರು. ಈ ಮೂಲಕ ಚುಟುಕು ಕ್ರಿಕೆಟ್ನಲ್ಲಿ ವೇಗವಾಗಿ ಈ ಮೈಲಿಗಲ್ಲು ದಾಟಿದ ಭಾರತೀಯ ಬ್ಯಾಟರ್ ಎಂಬ ದಾಖಲೆಗೆ ಪಾತ್ರರಾದರು.
ಕೆ.ಎಲ್.ರಾಹುಲ್ ಈ ಮೈಲಿಗಲ್ಲನ್ನು ತಮ್ಮ 179ನೇ ಇನ್ನಿಂಗ್ಸ್ನಲ್ಲಿ ತಲುಪಿದರು. ಕನ್ನಡಿಗನಿಗೂ ಮುನ್ನ ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 184 ಇನ್ನಿಂಗ್ಸ್ಗಳಲ್ಲಿ 6 ಸಾವಿರ ರನ್ ಗಡಿ ದಾಟಿದ್ದರು.
ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಇದೀಗ ಟಿ20 ಕ್ರಿಕೆಟ್ನಲ್ಲಿ ವೇಗವಾಗಿ 6 ಸಾವಿರ ರನ್ ಗಳಿಸಿರುವ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಗ್ರಿಸ್ ಗೇಲ್(162 ಇನ್ನಿಂಗ್ಸ್) ಮತ್ತು ಪಾಕಿಸ್ತಾನ ನಾಯಕ ಬಾಬರ್ ಅಜಮ್(165) ಗಿಂತ ಹಿಂದಿದ್ದಾರೆ. ರಾಹುಲ್ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿದ್ದು, ರಾಜಸ್ಥಾನ್ ರಾಯಲ್ಸ್ನ ಜಾಸ್ ಬಟ್ಲರ್ ಹೊರತುಪಡಿಸಿ ಶತಕ ಸಿಡಿಸಿರುವ ಬ್ಯಾಟರ್ ಎನಿಸಿಕೊಂಡಿದ್ದಾರೆ.
ನಿನ್ನೆಯ ಪಂದ್ಯದಲ್ಲಿ ಮೊದಲ ಓವರ್ನಲ್ಲೇ 2 ವಿಕೆಟ್ ಕಳೆದುಕೊಂಡು ನಾಯಕ ಫಾಫ್ ಡು ಪ್ಲೆಸಿಸ್ ಅವರ 96 ರನ್ಗಳ ನೆರವಿನಿಂದ ಆರ್ಸಿಬಿ 181 ರನ್ಗಳಿಸಿತ್ತು. ಇದಕ್ಕುತ್ತರವಾಗಿ ಲಖನೌ ತಂಡ 163 ರನ್ಗಳಿಸಲಷ್ಟೇ ಶಕ್ತವಾಗಿ 18 ರನ್ಗಳ ಜಯ ಸಾಧಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು.
ಇದನ್ನೂ ಓದಿ:ಸೋಲಿನ ಮೇಲೆ ಬರೆ, ಲಖನೌ ನಾಯಕ ಕನ್ನಡಿಗ ಕೆ ಎಲ್ ರಾಹುಲ್ಗೆ ಮತ್ತೆ ದಂಡ