ಹೈದರಾಬಾದ್ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 15ನೇ ಸೀಸನ್ ಇಂದಿನಿಂದ ಮುಂಬೈನಲ್ಲಿ ಆರಂಭವಾಗಲಿದೆ. ತಂಡಗಳ ಸಂಖ್ಯೆಯನ್ನು ಹೆಚ್ಚಿಸುವುದರೊಂದಿಗೆ, ಈ ಬಾರಿ ಲೀಗ್‌ನಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಈ ಬಾರಿಯ ಟೂರ್ನಿ ಇನ್ನಷ್ಟು ರೋಚಕವಾಗುವ ನಿರೀಕ್ಷೆ ಇದೆ.
ಐಪಿಎಲ್ 2022ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಕಳೆದ ವರ್ಷದ ರನ್ನರ್ ಅಪ್ ಆಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಲಿದೆ. ಉಭಯ ತಂಡಗಳಿಗೆ ಈ ಬಾರಿ ಹೊಸ ನಾಯಕರಿದ್ದಾರೆ. ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್, ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ರವೀಂದ್ರ ಜಡೇಜಾ ನಾಯಕರಾಗಿದ್ದು, ಹೊಸ ಜವಾಬ್ದಾರಿಗಳು ಹೊಸ ರೋಚಕತೆಯನ್ನು ಸೃಷ್ಟಿಸುವ ಸಾಧ್ಯತೆ ಇರುತ್ತದೆ.
ಪಂದ್ಯದ ಪ್ರಸಾರದ ಬಗ್ಗೆ..
- ಇಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಮತ್ತು ಕೋಲ್ಕತ್ತಾ ನಡುವೆ ಮೊದಲ ಪಂದ್ಯ ನಡೆಯಲಿದೆ.
- ರಾತ್ರಿ ಏಳು ಗಂಟೆಗೆ ಟಾಸ್ ನಡೆಯಲಿದ್ದು, ಮೊದಲ ಎಸೆತ 7.30ಕ್ಕೆ ನಡೆಯಲಿದೆ.
- ಪಂದ್ಯಗಳ ಪ್ರಸಾರದ ಹಕ್ಕುಗಳು ಸ್ಟಾರ್ ನೆಟ್ವರ್ಕ್ಗಿದ್ದು, ಸ್ಟಾರ್ ಸ್ಪೋರ್ಟ್ಸ್ ವಾಹಿನಿಯಲ್ಲಿ ಪ್ರಸಾರವಾಗಲಿವೆ.
- ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ವಿವಿಧ ಭಾಷೆಗಳಲ್ಲಿ ಲೈವ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಭವನೀಯರ ಪಟ್ಟಿ : ರವೀಂದ್ರ ಜಡೇಜಾ, ರಿತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಎಂ.ಎಸ್ ಧೋನಿ, ಶಿವಂ ದುಬೆ, ಡ್ವೇನ್ ಬ್ರಾವೋ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್ ಮತ್ತು ಆ್ಯಡಂ ಮಿಲ್ನೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸಂಭವನೀಯರ ಪಟ್ಟಿ: ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ಅಜಿಂಕ್ಯಾ ರಹಾನೆ, ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್, ಆಂಡ್ರ್ಯೂ ರಸೆಲ್, ಮೊಹಮ್ಮದ್ ನಬಿ ಅಥವಾ ಟಿಮ್ ಸೌಥಿ, ಸುನಿಲ್ ನರೈನ್, ಶಿವಂ ಮಾವಿ, ಉಮೇಶ್ ಯಾದವ್ ಮತ್ತು ವರುಣ್ ಚಕ್ರವರ್ತಿ.
ಇದನ್ನೂ ಓದಿ: 'ತಂಡಗಳು ವೃತ್ತಿಪರವಾಗಿರಬೇಕು': ರಾಜಸ್ಥಾನ ರಾಯಲ್ಸ್ ಟ್ವಿಟರ್ ಪೋಸ್ಟ್ ವಿರುದ್ಧ ಕ್ಯಾಪ್ಟನ್ ಗರಂ