ಬೆಂಗಳೂರು: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮೆಗಾ ಹರಾಜಿನಲ್ಲಿ ಭಾಗವಹಿಸಿಲ್ಲ ಆದರೆ, ಎಸ್‌ಆರ್‌ಕೆ ಪರ ಅವರ ಪುತ್ರ ಆರ್ಯನ್ ಖಾನ್ ಮತ್ತು ಮಗಳು ಸುಹಾನಾ ಖಾನ್ ಭಾಗವಹಿಸಿದ್ದಾರೆ . ಖಾನ್ ಪುತ್ರ- ಪುತ್ರಿಯ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೂರ್ವ ಹರಾಜು ಕಾರ್ಯಕ್ರಮದ ಕೆಲವು ಚಿತ್ರಗಳನ್ನು ಹಂಚಿಕೊಳ್ಳಲಾಗಿದೆ. ಒಂದು ಚಿತ್ರದಲ್ಲಿ, ಆರ್ಯನ್ ತನ್ನ ಪಕ್ಕದಲ್ಲಿ ಕುಳಿತಿರುವ ವ್ಯಕ್ತಿಯೊಂದಿಗೆ ಸಂಭಾಷಣೆಯಲ್ಲಿ ಕಾಣಿಸಿಕೊಂಡಿದ್ದರೆ, ಸುಹಾನಾ ಅವನ ಪಕ್ಕದಲ್ಲಿ ಆಸೀನರಾಗಿರುವುದನ್ನು ಕಾಣಬಹುದಾಗಿದೆ.
ಆರ್ಯನ್ ಎರಡನೇ ಬಾರಿಗೆ ಐಪಿಎಲ್ ಹರಾಜಿನಲ್ಲಿ ಭಾಗವಹಿಸಿದರೆ, ಸುಹಾನಾ ಮೊದಲ ಬಾರಿಗೆ ಐಪಿಎಲ್ 2022 ರ ಮೆಗಾ ಹರಾಜು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ 370 ಭಾರತೀಯ ಮತ್ತು 220 ವಿದೇಶಿ ಸೇರಿ ಒಟ್ಟು 590 ಆಟಗಾರರ ಹರಾಜು ನಡೆಯಲಿದೆ.
- — IndianPremierLeague (@IPL) February 11, 2022 " class="align-text-top noRightClick twitterSection" data="
— IndianPremierLeague (@IPL) February 11, 2022
">— IndianPremierLeague (@IPL) February 11, 2022
ಡ್ರಗ್ಸ್ ಪ್ರಕರಣದ ನಂತರ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಆರ್ಯನ್: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಡ್ರಗ್ ಪ್ರಕರಣದಲ್ಲಿ ಸಿಲುಕಿದ ನಂತರ ಆರ್ಯನ್ ಅವರ ಮೊದಲ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಡ್ರಗ್ ಪ್ರಕರಣದಲ್ಲಿ ಆರ್ಯನ್ ಒಂದು ತಿಂಗಳ ಕಾಲ ಜೈಲಿನಲ್ಲಿ ಇದ್ದರು. ಅಕ್ಟೋಬರ್ 30, 2021 ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಸುಹಾನಾ ಪ್ರಸ್ತುತ ನ್ಯೂಯಾರ್ಕ್ ವಿಶ್ವವಿದ್ಯಾಲಯದಲ್ಲಿ ಚಲನಚಿತ್ರ ಅಧ್ಯಯನ ಕೋರ್ಸ್ ಮಾಡುತ್ತಿದ್ದು, ರಜೆಗಾಗಿ ಭಾರತಕ್ಕೆ ಮರಳಿದ್ದಾರೆ. ಅವರು ಜೋಯಾ ಅಖ್ತರ್ ಅವರ ಚಿತ್ರದೊಂದಿಗೆ ಬಾಲಿವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ ಎಂದು ವರದಿಯಾಗಿದೆ, ಇದರಲ್ಲಿ ಅಮಿತಾಬ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಕೂಡ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ: ಹಿಜಾಬ್ ವಿವಾದ ನಮ್ಮ ಆಂತರಿಕ ವಿಚಾರ, ಅಭಿಪ್ರಾಯ ಹೊರಹಾಕುವುದು ಸರಿಯಲ್ಲ: ರಾಷ್ಟ್ರಗಳಿಗೆ ವಿದೇಶಾಂಗ ಇಲಾಖೆ ಸೂಚನೆ