ETV Bharat / sports

ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿ: ಇಂಗ್ಲೆಂಡ್‌ ಕ್ರಿಕೆಟ್‌ಗೆ ಬಿಸಿಸಿಐ ಮನವಿ - ಭಾರತ-ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿ

ಈಗಿನ ವೇಳಾಪಟ್ಟಿಯ ಪ್ರಕಾರ, ಆಗಸ್ಟ್‌ 4ಕ್ಕೆ ಆರಂಭಗೊಳ್ಳುವ ಭಾರತ-ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 14ಕ್ಕೆ ಕೊನೆಗೊಳ್ಳಲಿದೆ. ಈ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿದರೆ ಐಪಿಎಲ್‌ನ ಉಳಿದ ಪಂದ್ಯಗಳನ್ನು ನಡೆಸಲು ಹೆಚ್ಚಿನ ಅನುಕೂಲವಾಗಲಿದೆ ಎಂದು ಬಿಸಿಸಿಐ ಹೇಳುತ್ತಿದೆ.

BCCI
BCCI
author img

By

Published : May 21, 2021, 9:04 AM IST

ಮುಂಬೈ: ಇಂಗ್ಲೆಂಡ್ ಮತ್ತು ಭಾರತ ತಂಡಗಳ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಗೆ (ಇಸಿಬಿ) ಗೆ ಮನವಿ ಮಾಡಿದೆ.

ಈ ಮೂಲಕ ಕೋವಿಡ್​ನಿಂದ ಮುಂದೂಡಲ್ಪಟ್ಟಿರುವ ಈ ಬಾರಿಯ ಐಪಿಎಲ್​ ಟೂರ್ನಿಯ ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್​ನಲ್ಲಿ ನಡೆಸುವ ಯೋಜನೆಯನ್ನು ಬಿಸಿಸಿಐ ಹೊಂದಿದೆ.

ಈಗಿನ ವೇಳಾಪಟ್ಟಿಯ ಪ್ರಕಾರ, ಆಗಸ್ಟ್‌ 4ಕ್ಕೆ ಆರಂಭಗೊಳ್ಳುವ ಭಾರತ-ಇಂಗ್ಲೆಂಡ್ ಐದು ಪಂದ್ಯಗಳ ಟೆಸ್ಟ್ ಸರಣಿ ಸೆಪ್ಟೆಂಬರ್ 14ಕ್ಕೆ ಕೊನೆಗೊಳ್ಳಲಿದೆ. ಈ ಸರಣಿಯನ್ನು ಒಂದು ವಾರ ಮುಂಚಿತವಾಗಿ ನಡೆಸಿದರೆ ಐಪಿಎಲ್ ನಡೆಸಲು ಹೆಚ್ಚಿನ ಅನುಕೂಲವಾಗಲಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಐಸಿಸಿ ಟಿ-20 ವಿಶ್ವಕಪ್​ ಆರಂಭವಾಗಲಿದ್ದು, ಈ ಟೂರ್ನಿಯಲ್ಲಿ ಭಾಗವಹಿಸಲು ತಂಡಗಳು ಭಾರತಕ್ಕೆ ಬರಲು ಪ್ರಾರಂಭಿಸುತ್ತವೆ. ಹಾಗಾಗಿ ಅಷ್ಟರೊಳಗೆ ಐಪಿಎಲ್ ಮುಗಿಸಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.