ಜೋಹಾನ್ಸ್ಬರ್ಗ್(ದಕ್ಷಿಣ ಆಫ್ರಿಕಾ): ಮುಂದಿನ ವರ್ಷದ ಜನವರಿ ತಿಂಗಳಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಚೊಚ್ಚಲ ಟಿ-20 ಲೀಗ್ ನಡೆಯಲಿದ್ದು, ಇದರಲ್ಲಿ ಒಟ್ಟು ಆರು ತಂಡಗಳು ಸೆಣಸಾಟ ನಡೆಸಲಿವೆ. ಈ ಎಲ್ಲ ತಂಡಗಳನ್ನ ಇಂಡಿಯನ್ ಪ್ರೀಮಿಯರ್ ಲೀಗ್‌ನ ಫ್ರಾಂಚೈಸಿಗಳು ಖರೀದಿ ಮಾಡಿವೆ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾ ಮಾಹಿತಿ ನೀಡಿದೆ.
ಐಪಿಎಲ್ನ ಯಶಸ್ವಿ ತಂಡಗಳಲ್ಲಿ ಒಂದಾಗಿರುವ ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಖನೌ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರು ತಂಡಗಳ ಖರೀದಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಬೈ ಇಂಡಿಯನ್ಸ್ ಕೇಪ್ ಟೌನ್ ಫ್ರಾಂಚೈಸಿ ಖರೀದಿಸಿದ್ದು, ಸನ್ರೈಸರ್ಸ್ ಹೈದರಾಬಾದ್ ಎಲಿಜಬೆತ್ ತಂಡ, ಲಖನೌ ಸೂಪರ್ ಜೈಂಟ್ಸ್ ಡರ್ಬನ್ ತಂಡ, ರಾಜಸ್ಥಾನ ರಾಯಲ್ಸ್ ಪಾರ್ಲ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ಪ್ರಿಟೋರಿಯಾ ತಂಡ ವನ್ನ ಖರೀದಿ ಮಾಡಿದೆ. ವಿಶೇಷವೆಂದರೆ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾವುದೇ ತಂಡವನ್ನ ಖರೀದಿಸಿಲ್ಲ.
ದಕ್ಷಿಣ ಆಫ್ರಿಕಾ ಮಾಜಿ ನಾಯಕ ಗ್ರೇಮ್ ಸ್ಮಿತ್ ಲೀಗ್‌ನ ಆಯುಕ್ತರಾಗಿ ನೇಮಕಗೊಂಡಿದ್ದು, ಲೀಗ್‌ನ ವೇಳಾಪಟ್ಟಿ ಹಾಗೂ ಪಂದ್ಯಗಳ ಮಾದರಿ ಕೆಲ ದಿನಗಳಲ್ಲಿ ಪ್ರಕಟಗೊಳ್ಳಲಿದೆ. ಈ ಹಿಂದೆ 2017ರಲ್ಲಿ ಟಿ-20 ಲೀಗ್ ಆರಂಭಿಸಿ ಕೈಸುಟ್ಟುಕೊಂಡಿದ್ದ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಇದೀಗ ಮತ್ತೊಮ್ಮೆ ಅಂತಹ ಸಾಹಸಕ್ಕೆ ಕೈಹಾಕಿದೆ.
ಇದನ್ನೂ ಓದಿರಿ: ENG vs SA: ವಿದಾಯದ ಪಂದ್ಯದಲ್ಲಿ ಸೋತು ನಿರ್ಗಮಿಸಿದ ಬೆನ್ ಸ್ಟೋಕ್ಸ್; ದ.ಆಫ್ರಿಕಾಗೆ 62 ರನ್ ಜಯ