ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ನಿನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ 52 ರನ್‌ಗಳ ಗೆಲುವು ದಾಖಲು ಮಾಡಿದ್ದು, ಪ್ಲೇ-ಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಜಯ ದಾಖಲಿಸಿದ ಬಳಿಕ ಮಾತನಾಡಿರುವ ಶ್ರೇಯಸ್ ಅಯ್ಯರ್, ಆಡುವ 11ರ ಬಳಗ ಆಯ್ಕೆ ವಿಚಾರದಲ್ಲಿ ಸಿಇಒ ಕೂಡ ಭಾಗಿಯಾಗುತ್ತಾರೆ ಎಂದು ಹೇಳಿಕೊಂಡಿದ್ದಾರೆಂದು ವರದಿಯಾಗಿದೆ.
ಆಡುವ 11ರ ಬಳಗ ಆಯ್ಕೆ ಮಾಡುವುದು ಕಷ್ಟಕರ. ನೀವೂ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ ಎಂದು ಪ್ಲೇಯರ್ಸ್ಗೆ ಹೇಳುವುದು ತುಂಬಾ ಕಷ್ಟದ ಕೆಲಸವಾಗಿದ್ದು, ಆಡುವ 11ರ ಬಳಗ ಆಯ್ಕೆ ಮಾಡುವ ಸಂದರ್ಭದಲ್ಲಿ ಸಿಇಒ ವೆಂಕಿ ಮೈಸೂರು ಸಹ ಭಾಗಿಯಾಗುತ್ತಾರೆ ಎಂದಿದ್ದಾರೆ.
ಐಪಿಎಲ್ ಆಡಲು ಆರಂಭಿಸಿದಾಗ ನಾನು ಕೂಡ ಆ ಸ್ಥಾನದಿಂದ ಬಂದಿದ್ದೇನೆ. ಕೋಚ್ ಜೊತೆ ಚರ್ಚೆ ಮಾಡಿದ ಬಳಿಕ ಆಡುವ 11ರ ಬಳಗ ಆಯ್ಕೆ ಮಾಡಲಾಗುತ್ತದೆ. ನಿಸ್ಸಂಶವಾಗಿ ಸಿಇಒ ಕೂಡ ಇದರಲ್ಲಿ ಭಾಗಿಯಾಗುತ್ತಾರೆ. ತಂಡ ಆಯ್ಕೆ ನಂತರ ಕೋಚ್ ಆಟಗಾರರ ಬಳಿ ಹೋಗಿ, ನೀವೂ ಇಂದಿನ ಪಂದ್ಯ ಆಡುತ್ತಿಲ್ಲ ಎಂದು ತಿಳಿಸುತ್ತಾರೆ.
ಇದನ್ನೂ ಓದಿ: ವಿಶ್ವಕಪ್ಗೂ ಮುನ್ನ ಆಸ್ಟ್ರೇಲಿಯಾ-ಭಾರತದ ನಡುವೆ ಮೂರು ಟಿ20 ಪಂದ್ಯ
ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಿರ್ಧಾರ ಕೈಗೊಳ್ಳುವ ಸಂದರ್ಭದಲ್ಲಿ ಎಲ್ಲರೂ ಬೆಂಬಲ ನೀಡುತ್ತಾರೆ. ನಾಯಕನಾಗಿ ಇದರ ಬಗ್ಗೆ ನನಗೆ ಹೆಮ್ಮೆ ಇದೆ ಎಂದಿದ್ದಾರೆ. ಇದೇ ವೇಳೆ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವಿನ ಬಗ್ಗೆ ಮಾತನಾಡಿದ ಶ್ರೇಯಸ್, ಖಂಡಿತವಾಗಿ ದೊಡ್ಡ ಅಂತರದಿಂದ ಗೆಲುವು ದಾಖಲು ಮಾಡಿರುವುದು ತೃಪ್ತಿ ನೀಡಿದೆ. ಮುಂದಿನ ಪಂದ್ಯಗಳಲ್ಲೂ ಉತ್ತಮ ಪ್ರದರ್ಶನ ನೀಡುವ ಇರಾದೆ ಇದೆ ಎಂದರು.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬ ಮಾತನ್ನ ಟೀಂ ಇಂಡಿಯಾ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಈ ರೀತಿಯಾಗಿ ಮಾತನಾಡಿದ್ದು, ಎಲ್ಲವೂ ಸರಿಯಾಗಿದೆ ಎಂದಿದ್ದಾರೆ.