ETV Bharat / sports

ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ನೀಲಿ ಜರ್ಸಿಯಲ್ಲಿ ಕಣಕ್ಕಿಳಿಯಲಿರುವ ಆರ್​ಸಿಬಿ - ನೀಲಿ ಜರ್ಸಿಯಲ್ಲಿ ಕಣಕ್ಕಿಳಿಯಲಿರುವ ಆರ್​ಸಿಬಿ

ಕೊರೊನಾ ವೈರಸ್ ವಿರುದ್ಧ ಹಗಲು ಇರುಳೆನ್ನದೆ ಹೋರಾಡಿತ್ತಿರುವ ಕೊರೊನಾ ವಾರಿಯರ್ಸ್ ಶ್ರಮಕ್ಕೆ ಗೌರವ ಸೂಚಿಸುವ ಉದ್ದೇಶದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಲಿ ಜೆರ್ಸಿಯನ್ನು ತೊಟ್ಟು ಪಂದ್ಯವನ್ನಾಡಲಿದೆ.

ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ನೀಲಿ ಜರ್ಸಿಯಲ್ಲಿ ಕಣಕ್ಕಿಳಿಯಲಿರುವ ಆರ್​ಸಿಬಿ

author img

By

Published : May 2, 2021, 2:30 PM IST

ಹೈದರಾಬಾದ್: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಆರಂಭವನ್ನೇ ಪಡೆದುಕೊಂಡಿತು. ಟೂರ್ನಿಯಲ್ಲಿ ಇದುವರೆಗೂ 7 ಪಂದ್ಯಗಳನ್ನಾಡಿದ್ದು, ಅದರಲ್ಲಿ 5ರಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋಲನುಭವಿಸಿ, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡು ಕಪ್​​ ಗೆಲ್ಲುವತ್ತ ಚಿತ್ತ ನೆಟ್ಟಿದೆ. ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಾಯಲ್ ಚಾಲೆಂಜರ್ಸ್ ತಂಡ ಇದೀಗ ಸಾಮಾಜಿಕ ಕಳಕಳಿಯುಳ್ಳ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದೆ.

  • This season RCB is going to be sporting a special Blue jersey in 1 of the upcoming matches with key messaging on the match kit to pay our respect & show solidarity to all the front line heroes who have spent last year wearing PPE kits & leading the fight against the pandemic. pic.twitter.com/HUOAL12VVy

    — Royal Challengers Bangalore (@RCBTweets) May 2, 2021 " class="align-text-top noRightClick twitterSection" data=" ">

ಹೌದು, ಈ ಐಪಿಎಲ್ ಟೂರ್ನಿಯ ಮುಂದಿನ ಪಂದ್ಯವೊಂದರಲ್ಲಿ ನೀಲಿ ಜೆರ್ಸಿ ತೊಟ್ಟು ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಣಕ್ಕಿಳಿಯಲಿದೆ. ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ತಂಡ ಈ ತೀರ್ಮಾನಕ್ಕೆ ಬಂದಿದೆ. ಕೊರೊನಾ ವೈರಸ್ ವಿರುದ್ಧ ಹಗಲು ಇರುಳೆನ್ನದೆ ಹೋರಾಡಿತ್ತಿರುವ ಕೊರೊನಾ ವಾರಿಯರ್ಸ್ ಶ್ರಮಕ್ಕೆ ಗೌರವ ಸೂಚಿಸುವ ಉದ್ದೇಶದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಲಿ ಜೆರ್ಸಿಯನ್ನು ತೊಟ್ಟು ಪಂದ್ಯವನ್ನಾಡಲಿದೆ. ಈ ಪಂದ್ಯದಲ್ಲಿ ಬಳಸುವ ಮ್ಯಾಚ್ ಕಿಟ್ ಮೇಲೆ ಕೊರೊನಾ ವಾರಿಯರ್ಸ್ ಕುರಿತು ವಿಶೇಷ ಸಂದೇಶವನ್ನು ಬರೆಯಲಾಗಿರುತ್ತದೆ ಎಂದು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.

ಈ ಸಂದೇಶವುಳ್ಳ ನೀಲಿ ಜೆರ್ಸಿ ತೊಟ್ಟು ಪಂದ್ಯವನ್ನಾಡಿ, ಪಂದ್ಯ ಮುಗಿದ ನಂತರ ನೀಲಿ ಜೆರ್ಸಿಗಳ ಮೇಲೆ ತಂಡದ ಆಟಗಾರರ ಸಹಿಗಳನ್ನು ಹಾಕಿ ಅವುಗಳನ್ನು ಹರಾಜಿನಲ್ಲಿ ಮಾರಾಟ ಮಾಡುವ ಮೂಲಕ ಬಂದ ಹಣವನ್ನು ಕೊರೊನಾ ವಿರುದ್ಧದ ಹೋರಾಟಕ್ಕೆ ನೀಡಲಾಗುವುದು ಎಂದು ಆರ್‌ಸಿಬಿ ತಿಳಿಸಿದೆ. ಕಳೆದ ವರ್ಷ ಪಿಪಿಇ ಕಿಟ್ ಧರಿಸಿ ಕೊರೊನಾ ಮಹಾಮಾರಿ ವಿರುದ್ಧ ಹೋರಾಡಿದ ಕೊರೊನಾ ವಾರಿಯರ್ಸ್ ಪಟ್ಟ ಶ್ರಮಕ್ಕೆ ಗೌರವ ಸಲ್ಲಿಸಲು ನೀಲಿ ಜೆರ್ಸಿ ತೊಟ್ಟು ಪಂದ್ಯವನ್ನಾಡಲಿದ್ದಾರೆ. ಅಷ್ಟೇ ಅಲ್ಲದೆ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಆಕ್ಸಿಜನ್ ಸರಬರಾಜು ಮಾಡುವುದಕ್ಕೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರ್ಥಿಕ ಸಹಾಯ ಮಾಡಲಿದೆ ಎಂದು ಆರ್‌ಸಿಬಿ ತಿಳಿಸಿದೆ.

ಇಷ್ಟು ವರ್ಷ ಪಂದ್ಯಗಳಲ್ಲಿ ಪ್ಲಾಸ್ಟಿಕ್ ಮರುಬಳಕೆ ಕುರಿತು ಸಂದೇಶವನ್ನು ರವಾನಿಸಲು ಹಸಿರು ಜೆರ್ಸಿ ತೊಟ್ಟು ಆಡುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಈ ಬಾರಿ ಕೊರೊನಾ ವಾರಿಯರ್ಸ್ ಪಟ್ಟ ಶ್ರಮಕ್ಕೆ ಗೌರವವನ್ನು ಸಲ್ಲಿಸಲು ನೀಲಿ ಜೆರ್ಸಿ ತೊಟ್ಟು ಪಂದ್ಯವನ್ನಾಡಲಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.