ನವದೆಹಲಿ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವೆ ಇಂದು ನಡೆಯಬೇಕಿದ್ದ ಪಂದ್ಯ ರದ್ದಾಗಿದೆ.
ಕೋಲ್ಕತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಗೆ ಮಾಹಿತಿ ನೀಡಿರುವ ಬಿಸಿಸಿಐ ಅಧಿಕಾರಿಯೊಬ್ಬರು, ಕೆಕೆಆರ್ ತಂಡದಲ್ಲಿ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಆರ್‌ಸಿಬಿ ವಿರುದ್ಧ ಇಂದು ನಡೆಯಬೇಕಿದ್ದ ಪಂದ್ಯ ಮುಂದೂಡಲಾಗಿದೆ. ಕೊರೊನಾ ಸೋಂಕು ತಗುಲಿರುವ ಕಾರಣ ಎರಡು ತಂಡಗಳ ಆಟಗಾರರಿಗೆ ಸುರಕ್ಷಿತವಾಗಿರಲು ಸೂಚನೆ ನೀಡಲಾಗಿದೆ" ಎಂದು ಮಾಹಿತಿ ನೀಡಿದ್ದಾರೆ.