ETV Bharat / sports

ಮುಂಬೈ ಇಂಡಿಯನ್ಸ್ ಕೊನೆಯ ಲೀಗ್ ಪಂದ್ಯ.. ಸಚಿನ್ ಮಗನಿಗೆ ಚಾನ್ಸ್​!?

author img

By

Published : May 21, 2022, 5:40 PM IST

2022ರ ಇಂಡಿಯನ್​ ಪ್ರೀಮಿಯರ್ ಲೀಗ್​​ನಲ್ಲಿ ಮುಂಬೈ ಇಂಡಿಯನ್ಸ್ ಕೊನೆಯ ಲೀಗ್​ ಪಂದ್ಯವನ್ನಾಡಲಿದೆ. ಮಾಸ್ಟರ್ ಬ್ಲಾಸ್ಟರ್​ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್​ಗೆ ಅವಕಾಶ ಸಿಗುವ ಸಾಧ್ಯತೆ ಇದೆ..

Arjun Tendulkar in MI
Arjun Tendulkar in MI

ಮುಂಬೈ : ಪ್ರಸಕ್ತ ಸಾಲಿನ ಇಂಡಿಯನ್​ ಪ್ರೀಮಿಯರ್ ಲೀಗ್​​ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್​ ಇಂದು ಲೀಗ್​​ನ ಕೊನೆಯ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಕಳೆದ 27 ಪಂದ್ಯಗಳಿಂದ ಬೆಂಚ್​​ ಕಾಯುತ್ತಿರುವ ಅರ್ಜುನ್ ತೆಂಡೂಲ್ಕರ್​ಗೆ ಅವಕಾಶ ಸಿಗುವುದೇ ಎಂಬ ಕುತೂಹಲ ಮೂಡಿದೆ.

ಕಳೆದ ವರ್ಷದ ಐಪಿಎಲ್​ ಹರಾಜು ಪ್ರಕ್ರಿಯೆಯಲ್ಲಿ ಮೂಲ ಬೆಲೆ 30 ಲಕ್ಷ ರೂಪಾಯಿಗೆ ಮುಂಬೈ ಇಂಡಿಯನ್ಸ್​ ತಂಡದ ಪಾಲಾಗಿದ್ದ ಅರ್ಜುನ್ ತೆಂಡೂಲ್ಕರ್​ಗೆ ಯಾವುದೇ ಅವಕಾಶ ಸಿಕ್ಕಿರಲಿಲ್ಲ. ಈ ಸಲದ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಮೂಲ ಬೆಲೆಗೆ ಮುಂಬೈ ಬಳಗ ಸೇರಿಕೊಂಡಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮಗ ಅರ್ಜುನ್​, ಕೇವಲ ನೆಟ್​ನಲ್ಲಿ ಅಭ್ಯಾಸ ಮಾಡಿದ್ದು, ಈವರೆಗೆ ಯಾವುದೇ ಪಂದ್ಯದಲ್ಲಿ ಚಾನ್ಸ್​​ ಸಿಕ್ಕಿಲ್ಲ.

ಈಗಾಗಲೇ ಪ್ಲೇ-ಆಫ್​ ರೇಸ್​ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್​​ ತಂಡ ಇಂದಿನ ಪಂದ್ಯದಲ್ಲಿ ಕೆಲ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ, ಅರ್ಜುನ್ ತೆಂಡೂಲ್ಕರ್​ಗೆ ಅವಕಾಶ ಸಿಗುವ ಸಾಧ್ಯತೆ ಇದೆ. 22 ವರ್ಷದ ಎಡಗೈ ವೇಗದ ಬೌಲರ್​ ಆಗಿರುವ ಅರ್ಜುನ್ ತೆಂಡೂಲ್ಕರ್ ಬ್ಯಾಟಿಂಗ್​ನಲ್ಲೂ ಅಬ್ಬರಿಸುವ ಸಾಮರ್ಥ್ಯ ಹೊಂದಿದ್ದು, ತಮ್ಮ ಚೊಚ್ಚಲ ಅವಕಾಶಕ್ಕಾಗಿ ಕಾಯುತ್ತಿದ್ದಾರೆ.

ಇದನ್ನೂ ಓದಿ: ಮುಂಬೈ ತಂಡಕ್ಕೆ ನಮ್ಮ ಸಪೋರ್ಟ್​​.. 'ಪ್ರೊಫೈಲ್ ಲೋಗೋ' ಕಲರ್​ ಕೂಡ ಬದಲಿಸಿದ ಆರ್​ಸಿಬಿ

ಕಳೆದ ಕೆಲ ದಿನಗಳ ಹಿಂದೆ ನೆಟ್ಸ್‌​ನಲ್ಲಿ ಬೌಲಿಂಗ್​ ಅಭ್ಯಾಸ ನಡೆಸುತ್ತಿದ್ದ ವೇಳೆ ಅತ್ಯದ್ಭುತ ಯಾರ್ಕರ್​ ಎಸೆಯುವ ಮೂಲಕ ಇಶಾನ್ ಕಿಶನ್​ ಅವರನ್ನ ಕ್ಲೀನ್​ ಬೌಲ್ಡ್ ಮಾಡಿದ್ದ ಅರ್ಜುನ್ ಅನೇಕರ ಗಮನ ಸೆಳೆದಿದ್ದರು. ಆದರೂ ಕೂಡ ಇವರಿಗೆ ಅವಕಾಶ ಮಾತ್ರ ಸಿಕ್ಕಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.