ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈ ಸೀಸನ್ನಲ್ಲಿ ಹೇಳಿಕೊಳ್ಳುವಂತಹ ಆರಂಭ ಸಿಕ್ಕಿಲ್ಲ. ಇದೇ ಕಾರಣಕ್ಕಾಗಿ ಈಗಾಗಲೇ ಪ್ಲೇ-ಆಫ್ ರೇಸ್ನಿಂದ ಬಹುತೇಕ ಹೊರ ಬಿದ್ದಿದೆ. ಇದರ ಬೆನ್ನಲ್ಲೇ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಟೂರ್ನಿ ಆರಂಭಗೊಳ್ಳುತ್ತಿದ್ದಂತೆ ತಂಡದ ನಾಯಕತ್ವದ ಜವಾಬ್ದಾರಿ ಹೊತ್ತುಕೊಂಡಿದ್ದ ಆಲ್ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡಿದ್ದಾರೆ. ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಿಎಸ್ಕೆ ಫ್ರಾಂಚೈಸಿ ಖುದ್ದಾಗಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ.
-
📢 Official Announcement:
— Chennai Super Kings (@ChennaiIPL) May 11, 2022 " class="align-text-top noRightClick twitterSection" data="
Jadeja will be missing the rest of the IPL due to injury. Wishing our Jaadugar a speedy recovery! @imjadeja
">📢 Official Announcement:
— Chennai Super Kings (@ChennaiIPL) May 11, 2022
Jadeja will be missing the rest of the IPL due to injury. Wishing our Jaadugar a speedy recovery! @imjadeja📢 Official Announcement:
— Chennai Super Kings (@ChennaiIPL) May 11, 2022
Jadeja will be missing the rest of the IPL due to injury. Wishing our Jaadugar a speedy recovery! @imjadeja
2022ರ ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳುವುದಕ್ಕೂ ಮುಂಚಿತವಾಗಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಾಹರ್ ಆವೃತ್ತಿಯಿಂದ ಹೊರಗೆ ಉಳಿದಿದ್ದರು. ಇದಾದ ಬಳಿಕ ಆಡಮ್ ಮಿಲ್ನೆ ಕೂಡ ಹೊರಗೆ ಉಳಿದಿದ್ದರು. ಇದೀಗ ರವೀಂದ್ರ ಜಡೇಜಾ ಗಾಯಗೊಂಡಿದ್ದು, ಉಳಿದ ಪಂದ್ಯಗಳಿಗೆ ಗೈರಾಗಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ನಡೆದ ಪಂದ್ಯದ ವೇಳೆ ರವೀಂದ್ರ ಜಡೇಜಾ ಗಾಯಗೊಂಡಿದ್ದರು. ಹೀಗಾಗಿ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಜಡೇಜಾ ಮೈದಾನಕ್ಕಿಳಿದಿರಲಿಲ್ಲ. ಇದರ ಬೆನ್ನಲ್ಲೇ ಸಿಎಸ್ಕೆ ಈ ಮಾಹಿತಿ ಹಂಚಿಕೊಂಡಿದೆ.
ಇದನ್ನೂ ಓದಿ: ಮುಂಬೈ ತಂಡಕ್ಕೆ ಗಾಯದ ಮೇಲೆ ಬರೆ.. ಐಪಿಎಲ್ನಿಂದ ಹೊರಬಿದ್ದ ಸೂರ್ಯಕುಮಾರ್
2022ರ ಐಪಿಎಲ್ ಆರಂಭಗೊಳ್ಳುವುದಕ್ಕೂ ಮುಂಚಿತವಾಗಿ ಜಡೇಜಾ ತಂಡದ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದರು. ಆದರೆ, ತಂಡದ ಕಳಪೆ ಪ್ರದರ್ಶನದಿಂದಾಗಿ ಅವರು ತಮ್ಮ ನಾಯಕತ್ವದ ಜವಾಬ್ದಾರಿ ಮರಳಿ ಧೋನಿ ಹೆಗಲಿಗೆ ಹಾಕಿದ್ದರು. ಈ ಆವೃತ್ತಿಯಲ್ಲಿ ಸಿಎಸ್ಕೆ ಆಡಿರುವ 11 ಪಂದ್ಯಗಳ ಪೈಕಿ ಕೇವಲ 4ರಲ್ಲಿ ಗೆಲುವು ದಾಖಲಿಸಿ, 8 ಪಾಯಿಂಟ್ಗಳಿಸಿದೆ.
ಪ್ಲೇಆಫ್ಗೆ ಪ್ರವೇಶ ಪಡೆದುಕೊಳ್ಳಬೇಕಾದರೆ ಮುಂದಿನ ಎಲ್ಲ ಪಂದ್ಯ ಗೆಲ್ಲಬೇಕಾಗಿದ್ದು, ರಾಜಸ್ಥಾನ ಹಾಗೂ ಬೆಂಗಳೂರು ತಂಡಗಳು ಉಳಿದ ಪಂದ್ಯಗಳಲ್ಲಿ ಸೋಲು ಕಾಣಬೇಕಾಗಿದೆ. ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ಗಾಯಗೊಂಡಿರುವ ಕಾರಣ ಟೂರ್ನಿಯಿಂದ ಹೊರ ಬಿದ್ದಿದ್ದಾರೆ.