ಕೋಲ್ಕತ್ತಾ(ಪಶ್ಚಿಮ ಬಂಗಾಳ): ನಿತೀಶ್ ರಾಣಾ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಎರಡನೇ ಪಂದ್ಯ ಆಡಲಿದೆ. ಇದು ರಾಯಲ್‌ಗೂ ಎರಡನೇ ಪಂದ್ಯವಾಗಿದೆ. ಫಾಫ್ ಡು ಪ್ಲೆಸಿಸ್ ನಾಯಕತ್ವದಲ್ಲಿ ಏಪ್ರಿಲ್ 2 ರಂದು ನಡೆದಿದ್ದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಗಳಿಸಿತ್ತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಹಿತ್ ಶರ್ಮಾ ನೇತೃತ್ವದ ಮುಂಬೈ ತಂಡವನ್ನು ಎಂಟು ವಿಕೆಟ್ಗಳಿಂದ ಸೋಲಿಸಿತ್ತು.
ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 171 ರನ್ ಗಳಿಸಿತು. 172 ರನ್‌ಗಳ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 16.2 ಓವರ್‌ಗಳಲ್ಲಿ ಬೆನ್ನಟ್ಟಿತು. ಆರ್‌ಸಿಬಿ ಗೆಲುವಿನೊಂದಿಗೆ ಐಪಿಎಲ್ ಅಭಿಯಾನವನ್ನು ಪ್ರಾರಂಭಿಸಿತು. ಆದ್ರೆ ಕೋಲ್ಕತ್ತಾ ನೈಟ್ ರೈಡರ್ಸ್ ಮೊದಲ ಪಂದ್ಯದಲ್ಲಿಯೇ ಸೋಲನ್ನು ಎದುರಿಸಬೇಕಾಯಿತು. ಏಪ್ರಿಲ್ 1 ರಂದು ಮೊಹಾಲಿಯಲ್ಲಿ ನಡೆದ ಪಂದ್ಯದಲ್ಲಿ ಡಕ್ವರ್ತ್-ಲೂಯಿಸ್ ವಿಧಾನದ ಆಧಾರದ ಮೇಲೆ ಕೆಕೆಆರ್ ಅನ್ನು ಪಂಜಾಬ್ ಕಿಂಗ್ಸ್ ತಂಡ 7 ರನ್ಗಳಿಂದ ಸೋಲಿಸಿತು. ಪಂಜಾಬ್ ಪರ ಭಾನುಕಾ ರಾಜಪಕ್ಸೆ 50 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದರು. ನಾಯಕ ಶಿಖರ್ ಧವನ್ ಕೂಡ 40 ರನ್ ಗಳಿಸಿದ್ದರು.
ಕಳೆದ ಐದು ಮುಖಾಮುಖಿ ಪಂದ್ಯಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮೇಲೆ ಆರ್‌ಸಿಬಿ ಪ್ರಾಬಲ್ಯ ಸಾಧಿಸಿದೆ. ಆರ್‌ಸಿಬಿ ಮೂರು ಪಂದ್ಯಗಳನ್ನು ಗೆದ್ದಿದ್ರೆ, ಕೆಕೆಆರ್ ಎರಡು ಪಂದ್ಯಗಳಲ್ಲಿ ಜಯಗಳಿಸಿದೆ. ಐಪಿಎಲ್ 2023 ರಲ್ಲಿ ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಮೊದಲ ಮುಖಾಮುಖಿ ಇದಾಗಿದೆ. ಆರ್‌ಸಿಬಿಯ ಡ್ಯಾಶಿಂಗ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಮುಂಬೈ ವಿರುದ್ಧ ಕೊಹ್ಲಿ 82 ರನ್‌ಗಳ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದಾರೆ. ನಾಯಕ ಫಾಫ್ ಡು ಪ್ಲೆಸಿಸ್ ಕೂಡ ಕೊಹ್ಲಿಗೆ ಸಾಥ್ ನೀಡಿದ್ದರು. ಮೊದಲ ಪಂದ್ಯದಲ್ಲಿ ಫಾಫ್ 73 ರನ್‌ಗಳ ದೊಡ್ಡ ಇನಿಂಗ್ಸ್ ಆಡಿದ್ದರು. ನಿತೀಶ್ ರಾಣಾ ಈ ಪಂದ್ಯವನ್ನು ಗೆಲ್ಲಲು ಬಯಸಿದರೆು ಫಾಫ್ ಮತ್ತು ವಿರಾಟ್ ವಿಕೆಟ್ಗಳನ್ನು ಪಡೆಯಬೇಕಾಗುತ್ತದೆ. ಇಲ್ಲವಾದಲ್ಲಿ ಈ ಇಬ್ಬರು ಆಟಗಾರರೇ ಪಂದ್ಯವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ಯಾವುದೇ ಅನುಮಾನ ಇಲ್ಲ.
ಕೋಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ನಿತೀಶ್ ರಾಣಾ (ನಾಯಕ), ಮನದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ರಿಂಕು ಸಿಂಗ್, ಶಾರ್ದೂಲ್ ಠಾಕೂರ್, ಆಂಡ್ರೆ ರಸೆಲ್, ಟಿಮ್ ಸೌಥಿ, ಸುನಿಲ್ ನರೈನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ, ಅನುಕುಲ್ ರಾಯ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (WK), ಕರ್ಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ರೀಸ್ ಟೋಪ್ಲಿ, ಮೊಹಮ್ಮದ್ ಸಿರಾಜ್..