ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಪದೇ ಪದೇ ಗಾಯಗೊಳ್ಳುತ್ತಿದ್ದಾರೆ. ಒಂದೆಡೆ ಟೀಂ ಇಂಡಿಯಾಕ್ಕೆ ತಲೆನೋವಾದರೆ, ಮತ್ತೊಂದೆಡೆ ಐಪಿಎಲ್ ದೃಷ್ಟಿಯಿಂದ ಕೋಲ್ಕತ್ತಾ ನೈಟ್ ರೈಡರ್ಸ್‌ಗೂ ಸಂಕಷ್ಟ ಎದುರಾಗುವ ಸಾಧ್ಯತೆ ಹೆಚ್ಚಿದೆ.
ಹೊಸ ನಾಯಕನ ಹುಡುಕಾಟ ಜೋರು: ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್- 2023 ಸೀಸನ್‌ಗೆ ಶ್ರೇಯಸ್ ಅಯ್ಯರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. ಈ ಪರಿಸ್ಥಿತಿಯಲ್ಲಿ ಅವರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ತಮಗಾಗಿ ಹೊಸ ನಾಯಕನನ್ನು ಹುಡುಕುವ ಸ್ಥಿತಿ ನಿರ್ಮಾಣವಾಗಿದೆ.
ಸಂಪೂರ್ಣ ಫಿಟ್ ಆಗಿಲ್ಲ ಈ ಮೂವರು ಆಟಗಾರರು: ಟೀಂ ಇಂಡಿಯಾದ ಇಬ್ಬರು ಆಟಗಾರರಾದ ರಿಷಭ್ ಪಂತ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತೆ ಶ್ರೇಯಸ್ ಅಯ್ಯರ್ ಕೂಡ ಗಾಯಗೊಂಡಿದ್ದಾರೆ. ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ ಹಾಗೂ ಅವರು ಮುಂಬರುವ ಕ್ರಿಕೆಟ್ ಪಂದ್ಯಾವಳಿಗಳನ್ನು ದೀರ್ಘ ಕಾಲದವರೆಗೆ ಕಳೆದುಕೊಳ್ಳಬಹುದು ಎಂದು ಹೇಳಲಾಗುತ್ತಿದೆ. ಆರಂಭಿಕ ಹಲವು ಪಂದ್ಯಗಳಲ್ಲಿ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಜೊತೆ ಆಡುವ ಸಾಧ್ಯತೆ ಕಡಿಮೆಯಿದೆ.
ಅವರು ಸಂಪೂರ್ಣ ಫಿಟ್ ಆಗದಿದ್ದರೆ, ಐಪಿಎಲ್‌ನಲ್ಲಿ ಯಾವುದೇ ಪಂದ್ಯವನ್ನು ಆಡುವ ಸಂಭವ ಕಡಿಮೆಯಿದೆ. ಭಾರತೀಯ ಕ್ರಿಕೆಟ್ ತಂಡದ ಭಾಗವಾಗಿರುವ ಐಪಿಎಲ್‌ನಿಂದ ದೂರ ಉಳಿಯುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಆರಂಭಿಕ ಪಂದ್ಯಗಳಿಗೆ ಹೊಸ ನಾಯಕನನ್ನು ಹುಡುಕಬೇಕಾಗಬಹುದು ಅಥವಾ ಶ್ರೇಯಸ್ ಅಯ್ಯರ್ ಇಲ್ಲದೆ ಇಡೀ ಐಪಿಎಲ್ ಅನ್ನು ಆಡಬೇಕಾಗಬಹುದು.
ಶ್ರೇಯಸ್ ಅಯ್ಯರ್ಗೆ ಪದೇ ಪದೆ ಗಾಯ: ಈ ಮೊದಲು ಕೂಡಾ ಶ್ರೇಯಸ್ ಅಯ್ಯರ್ ಗಾಯದ ಕಾರಣ ಐಪಿಎಲ್‌ನಿಂದ ಹೊರಗುಳಿದಿದ್ದರು. ಡೆಲ್ಲಿ ಕ್ಯಾಪಿಟಲ್ಸ್ ತಂಡದ ರಿಷಬ್ ಪಂತ್ ಅನುಪಸ್ಥಿತಿಯಲ್ಲಿ ಶ್ರೇಯಸ್ ಅಯ್ಯರ್ ನಾಯಕನಾಗಿ ಆ ತಂಡವನ್ನು ಮುನ್ನಡೆಸಿದ್ದರು. ಅಂದಿನಿಂದ ಅವರು ದೆಹಲಿ ತಂಡದ ಸಾಮಾನ್ಯ ನಾಯಕರಾಗಿ ಮುಂದುವರೆದರು. ನಂತರ, ನ್ಯೂಜಿಲ್ಯಾಂಡ್ ವಿರುದ್ಧದ ODI ಸರಣಿಯ ಮೊದಲು ಅಯ್ಯರ್ ಗಾಯಗೊಂಡಿದ್ದರು. ಆಗ ರಜತ್ ಪಾಟಿದಾರ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು.
ಇದಾದ ನಂತರ ಅವರು ದೆಹಲಿಯಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಡಲು ಟೀಮ್ ಇಂಡಿಯಾವನ್ನು ಸೇರಿಕೊಂಡರು. ಆದರೆ, ಅವರು ಎರಡೂ ಇನ್ನಿಂಗ್ಸ್‌ಗಳಲ್ಲಿ ಕೇವಲ 4 ಮತ್ತು 12 ರನ್ ಮಾತ್ರ ಗಳಿಸಿದರು. ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಅವರು ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾದರು. ಆದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 26 ರನ್ ಗಳಿಸಿದರು.
ಫಿಟ್‌ನೆಸ್ ಸಮಸ್ಯೆಯಿಂದ ಕ್ರಿಕೆಟ್ ವೃತ್ತಿಜೀವನ ಹೊಡೆತ ಸಾಧ್ಯತೆ: ಶ್ರೇಯಸ್ ಅಯ್ಯರ್ ಅವರನ್ನು ಬ್ಯಾಟಿಂಗ್‌ನಲ್ಲಿ ಉತ್ತಮ ಆಯ್ಕೆಯಾಗಿ ಪರಿಗಣಿಸಲಾಗಿದೆ. ಮಧ್ಯಮ ಕ್ರಮಾಂಕದಲ್ಲಿ ಅವರು ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರೆಂದು ತೋರುತ್ತಿದೆ. ಆದರೆ, ಆಗಾಗ್ಗೆ ಗಾಯಗಳು ಮತ್ತು ಹೆಚ್ಚುತ್ತಿರುವ ಫಿಟ್‌ನೆಸ್ ಸಮಸ್ಯೆಗಳಿಂದ ಅವರ ಕ್ರಿಕೆಟ್ ವೃತ್ತಿ ಜೀವನ ಹಾಗೂ ತಂಡಕ್ಕೆ ಅಡ್ಡಿಯಾಗುತ್ತಿದೆ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ.
ಇದನ್ನೂ ಓದಿ: ICC Ranking: ಅಗ್ರ ಕ್ರಮಾಂಕದಲ್ಲೇ ಮುಂದುವರಿದ ಅಶ್ವಿನ್, 8 ಸ್ಥಾನ ಏರಿದ ವಿರಾಟ್