ಮುಂಬೈ : ಸೊಂಟದ ಗಾಯದಿಂದ ಬಳಲುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವೇಗಿ ಪ್ಯಾಟ್ ಕಮ್ಮಿನ್ಸ್ 15ನೇ ಆವೃತ್ತಿ ಇಂಡಿಯನ್ ಪ್ರೀಮಿಯರ್ ಲೀಗ್ನ ಉಳಿದ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಸೊಂಟದ ಗಾಯದಿಂದ ಚೇತರಿಸಿಕೊಳ್ಳಲು ಪ್ಯಾಟ್ ಕಮ್ಮಿನ್ಸ್ ತಮ್ಮ ಸ್ವದೇಶಕ್ಕೆ ತೆರಳಲು ಇಚ್ಛಿಸಿದ್ದಾರೆ ಎಂದು ವರಿದಿಯಾಗಿದೆ.
ಮಾಹಿತಿಗಳ ಪ್ರಕಾರ, ಪ್ಯಾಟ್ ಕಮ್ಮಿನ್ಸ್ ಸೊಂಟದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದ್ರೆ, ಈ ಗಾಯ ಅಷ್ಟು ಗಂಭೀರವಾಗಿಲ್ಲ ಎಂದು ತಿಳಿದು ಬಂದಿದೆ. ಆದರೆ, ಮುಂಬರುವ ಪಂದ್ಯಗಳ ದೃಷ್ಟಿಯಿಂದ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗ್ತಿದೆ.
ಓದಿ: ಯುಎಇ ಟಿ20 ಲೀಗ್: ಅಬು ಧಾಬಿ ಫ್ರಾಂಚೈಸಿ ಖರೀದಿಸಿದ ಕೋಲ್ಕತಾ ನೈಟ್ರೈಡರ್ಸ್
ಪ್ಯಾಟ್ ಕಮ್ಮಿನ್ಸ್ರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ₹7.25 ಕೋಟಿಗೆ ಬಿಡ್ ಮಾಡಿ ತನ್ನ ತಂಡಕ್ಕೆ ಕರೆದುಕೊಂಡಿತ್ತು. ಮೊದಲು ಅವರು ತಂಡದಲ್ಲಿ ಬೆಂಚ್ ಕಾಯ್ದಿದ್ದರು. ಬಳಿಕ ತಂಡದ 11ರ ಬಳಗದಲ್ಲಿ ಸ್ಥಾನದ ಪಡೆದಿದ್ದ ಅವರು, ಉತ್ತಮ ಪ್ರದರ್ಶನ ನೀಡಿದರು. ಮುಂಬೈ ಇಂಡಿಯನ್ಸ್ ವಿರುದ್ಧ 4 ಓವರ್ಗಳಿಗೆ 22 ರನ್ಗಳನ್ನು ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಆ ಪಂದ್ಯವನ್ನ ಕೋಲ್ಕತ್ತಾ ನೈಟ್ ರೈಡರ್ಸ್ 52 ರನ್ಗಳಿಂದ ಗೆಲುವು ಸಾಧಿಸಿತ್ತು.
ಈ ಬಾರಿಯ ಐಪಿಎಲ್ನಲ್ಲಿ ಪ್ಯಾಟ್ ಕಮ್ಮಿನ್ಸ್ ನಿಸ್ಸಂದೇಹವಾಗಿ ಆಡುತ್ತಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ಗೆ ಪ್ಲೇ ಆಫ್ಗೆ ಅರ್ಹತೆ ಪಡೆಯುವ ಅವಕಾಶ ಕಡಿಮೆ ಇದೆ. ಸೊಂಟದ ಸಮಸ್ಯೆ ಎದುರಿಸುತ್ತಿರುವ ಕಮ್ಮಿನ್ಸ್ ತಮ್ಮ ಆರೋಗ್ಯ ಚೇತರಿಕೆಗೆ ಹದಿನೈದು ದಿನಗಳನ್ನು ತೆಗೆದುಕೊಳ್ಳುವ ನೀರಿಕ್ಷೆಯಿದೆ. ಪ್ಯಾಟ್ ಕಮ್ಮಿನ್ಸ್ ಶ್ರೀಲಂಕಾ ವಿರುದ್ಧದ ಮೂರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಆದ್ರೆ, ಏಕದಿನ ಮತ್ತು ಟೆಸ್ಟ್ ಸರಣಿಗಾಗಿ ತಮ್ಮ ತಂಡವನ್ನು ಸೇರಿಕೊಳ್ಳಲಿದ್ದಾರೆ.