ಚೆನ್ನೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಟೂರ್ನಿಗೆ ಇಂದು ಚಾಲನೆ ಸಿಗಲಿದ್ದು, ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣಸಾಟ ನಡೆಸಲಿವೆ.
ಚೆನ್ನೈನ ಚಿದಂಬರಂ ಮೈದಾನದಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆಯಲಿದ್ದು, ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಸ್ಟಾರ್ ಪ್ಲೇಯರ್ ಅಲಭ್ಯ ಕಾಡಲಿದೆ.
ದಕ್ಷಿಣ ಆಫ್ರಿಕಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸಮನ್ ಕ್ವಿಂಟನ್ ಡಿಕಾಕ್ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ತಂಡ ಹೊರಹಾಕಿದೆ. ಈಗಾಗಲೇ ಚೆನ್ನೈಗೆ ಆಗಮಿಸಿರುವ ಕ್ವಿಂಟನ್ ಡಿಕಾಕ್ ಏಳು ದಿನಗಳ ಕ್ವಾರಂಟೈನ್ಗೊಳಗಾಗಿರುವ ಕಾರಣ ಅವರ ಸೇವೆ ಮೊದಲ ಪಂದ್ಯಕ್ಕೆ ಅಲಭ್ಯವಾಗಲಿದೆ.
ಕಳೆದ ಎರಡು ವರ್ಷಗಳಿಂದ ಕ್ವಿಂಟನ್ ಡಿಕಾಕ್ ಹಾಗೂ ರೋಹಿತ್ ಶರ್ಮಾ ಮುಂಬೈ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಆದರೆ, ಇದೀನ ಪಂದ್ಯದಲ್ಲಿ ರೋಹಿತ್ ಶರ್ಮಾ ಜತೆ ಇಶಾನ್ ಕಿಶನ್ ಇನ್ನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ.
ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕ್ರಿಸ್ ಲಿನ್, ಹಾರ್ದಿಕ್ ಪಾಂಡ್ಯ, ಅ್ಯಡಮ್ ಮಿಲ್ನೆ, ಆದಿತ್ಯ ತಾರೆ, ಅನ್ಮೋಲ್‌ಪ್ರೀತ್ ಸಿಂಗ್, ಅನುಕುಲ್ ರಾಯ್, ಅರ್ಜುನ್ ತೆಂಡೂಲ್ಕರ್, ಧವಲ್ ಕುಲಕರ್ಣಿ, ಜೇಮ್ಸ್ ನೀಶಮ್, ಜಸ್ಪ್ರೀತ್ ಬುಮ್ರಾ, ಜಯಂತ್ ಪೊಲಾರ್ಡ್, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ಮಾರ್ಕೊ ಜಾನ್ಸೆನ್, ಮೊಹ್ಸಿನ್ ಖಾನ್, ನಥನ್ ಕೌಲ್ಟರ್-ನೈಲ್, ಪಿಯೂಷ್ ಚಾವ್ಲಾ, ರಾಹುಲ್ ಚಹರ್, ಸೌರಭ್ ತಿವಾರಿ, ಟ್ರೆಂಟ್ ಬೌಲ್ಟ್, ಯುಧ್ವೀರ್ ಸಿಂಗ್
ಆರ್ಸಿಬಿ ತಂಡ: ವಿರಾಟ್ ಕೊಹ್ಲಿ (ನಾಯಕ), ದೇವದತ್ ಪಡಿಕ್ಕಲ್, ಫಿನ್ ಅಲೆನ್ (ವಿಕೆಟ್ ಕೀಪರ್), ಎಬಿ ಡಿ ವಿಲಿಯರ್ಸ್, ಪವನ್ ದೇಶಪಾಂಡೆ, ವಾಷಿಂಗ್ಟನ್ ಸುಂದರ್, ಡೇನಿಯಲ್ ಸ್ಯಾಮ್ಸ್, ಯುಜ್ವೇಂದ್ರ ಚಾಹಲ್, ಆ್ಯಡಮ್ ಜಂಪಾ, ಶಹಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಕೇನ್ ರಿಚರ್ಡ್ಸನ್ ಪಟೇಲ್, ಹರ್ಷೆಲ್ ಪಟೇಲ್, ಗ್ಲೆನ್ ಮ್ಯಾಕ್ಸ್‌ವೆಲ್, ಸಚಿನ್ ಬೇಬಿ, ರಜತ್ ಪಾಟಿದಾರ್, ಮೊಹಮ್ಮದ್ ಅಜರುದ್ದೀನ್, ಕೈಲ್ ಜೆಮೀಸನ್, ಡೇನಿಯಲ್ ಕ್ರಿಸ್ಚಿಯನ್, ಸುಯಾಶ್ ಪ್ರಭುದೇಸಾಯಿ, ಕೆ.ಎಸ್.ಭರತ್