ಪುಣೆ: ಇಂಡಿಯನ್ ಪ್ರೀಮಿಯರ್ ಲೀಗ್ನ 15ನೇ ಆವೃತ್ತಿಯ ನಿನ್ನೆಯ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ ರಾಯಲ್ಸ್ ಭರ್ಜರಿ ಗೆಲುವು ದಾಖಲು ಮಾಡಿ, ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. 61ರನ್‌ಗಳ ಅಂತರದ ಸೋಲು ಕಂಡಿರುವ ಕೇನ್ ವಿಲಿಯಮ್ಸನ್ ಪಡೆಗೆ ಇದೀಗ ದಂಡದ ಬರೆಯೂ ಬಿದ್ದಿದೆ.
ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಟಾಸ್ ಗೆದ್ದು ಬೌಲಿಂಗ್ ಮಾಡಿದ ಸನ್ರೈಸರ್ಸ್ ಹಲವು ನೋ ಬಾಲ್ ಎಸೆದ ಪರಿಣಾಮ ನಿಗದಿತ ಸಮಯದೊಳಗೆ ಓವರ್ ಮುಗಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಐಪಿಎಲ್ 2022: ಸನ್ ರೈಸರ್ಸ್ ವಿರುದ್ಧ ರಾಜಸ್ಥಾನಕ್ಕೆ 61ರನ್‌ಗಳ ಭರ್ಜರಿ ಗೆಲುವು
ನಿನ್ನೆ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಕ್ಯಾಪ್ಟನ್ ಸಂಜು ಸ್ಯಾಮ್ಸನ್, ಕನ್ನಡಿಗ ಪಡಿಕ್ಕಲ್, ಹೆಟ್ಮಾಯರ್ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 210ರನ್ಗಳಿಕೆ ಮಾಡಿತು. ಈ ಗುರಿ ಬೆನ್ನತ್ತಿದ್ದ ಸನ್ರೈಸರ್ಸ್ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 149ರನ್ಗಳಿಕೆ ಮಾಡಿದ್ದು, 61ರನ್‌ಗಳ ಸೋಲು ಕಂಡಿದೆ.