ETV Bharat / sports

ಸಂಜು ಸ್ಥಾನದಲ್ಲಿ ನಾನಿದ್ದರೆ.. ಆಸ್ಟ್ರೇಲಿಯಾ ಸರಣಿಗೆ ಸ್ಯಾಮ್ಸನ್ ಆಯ್ಕೆಯ ಬಗ್ಗೆ ಇರ್ಫಾನ್​ ಪ್ರತಿಕ್ರಿಯೆ - ರುತುರಾಜ್ ಗಾಯಕ್ವಾಡ್

ಸೆಪ್ಟೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಸಂಜು ಸ್ಯಾಮ್ಸನ್ ಹೆಸರು ಇಲ್ಲ. ಈ ಬಗ್ಗೆ ಭಾರತದ ಮಾಜಿ ಬೌಲರ್ ಇರ್ಫಾನ್ ಪಠಾಣ್ ಪ್ರತಿಕ್ರಿಯಿಸಿದ್ದಾರೆ.

irfan pathan speaks on sanju samson
irfan pathan speaks on sanju samson
author img

By ETV Bharat Karnataka Team

Published : Sep 19, 2023, 7:33 PM IST

ನವದೆಹಲಿ: ವಿಶ್ವಕಪ್​ಗೂ ಮುನ್ನ ಭಾರತದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಗೆ ನಿನ್ನೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಇದರಲ್ಲಿ ರುತುರಾಜ್ ಗಾಯಕ್ವಾಡ್ ಮತ್ತು ತಿಲಕ್ ವರ್ಮಾ ಅವರನ್ನು ಸೇರಿಸಲಾಗಿದೆ. ಅಲ್ಲದೇ ಸ್ಪಿನ್ನರ್​ ಆಗಿ ಆರ್ ಅಶ್ವಿನ್​ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಸಂಜು ಸ್ಯಾಮ್ಸನ್​ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಗಿಲ್ಲ. ಏಷ್ಯಾಕಪ್​ ತಂಡದಲ್ಲಿ ಮೀಸಲು ಆಟಗಾರನ ಸ್ಥಾನವನ್ನು ನೀಡಲಾಗಿತ್ತು. ಆದರೆ, ಆಸ್ಟ್ರೇಲಿಯಾ ವಿರುದ್ಧ ಅವರಿಗೆ ಅವಕಾಶ ನೀಡಲಾಗಿಲ್ಲ. ಈ ಬಗ್ಗೆ ಅವರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಜು ಸ್ಯಾಮ್ಸನ್ ತಂಡದಲ್ಲಿ ಆಯ್ಕೆಯಾಗದ್ದಕ್ಕೆ ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ 'ಸಂಜು ಸ್ಯಾಮ್ಸನ್ ಅವರ ಸ್ಥಾನದಲ್ಲಿ ನಾನಿದ್ದರೆ, ನಾನು ತುಂಬಾ ನಿರಾಶೆಗೊಳ್ಳುತ್ತಿದ್ದೆ' ಎಂದು ಹೇಳಿದ್ದಾರೆ. ಇರ್ಫಾನ್ ಪಠಾಣ್ ಅವರ ಈ ಪೋಸ್ಟ್‌ಗೆ ಅಭಿಮಾನಿಗಳು ನಿರಂತರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಸಂಜು ಸ್ಯಾಮ್ಸನ್‌ಗೆ ಹೀಗಾಗುತ್ತಿರುವುದು ಇದೇ ಮೊದಲಲ್ಲ, ಇದಕ್ಕೂ ಮುನ್ನ ನಿರಾಸೆ ಅನುಭವಿಸಿದ್ದಾರೆ ಎಂದು ಕಮೆಂಟ್​ನಲ್ಲಿ ಬರೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 55.71 ಸರಾಸರಿ ಇದ್ದರೂ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಏಕೆ ಆಯ್ಕೆ ಮಾಡುತ್ತಿಲ್ಲ ಎಂದು ಅಭಿಮಾನಿಗಳು ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್‌ನಲ್ಲಿ ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ಏಷ್ಯಾ ಕಪ್, ಮುಂಬರುವ ಏಷ್ಯನ್ ಗೇಮ್ಸ್, ವಿಶ್ವಕಪ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಸಂಜು ಸ್ಯಾಮ್ಸನ್ ಅವರನ್ನು ಕಡೆಗಣಿಸಲಾಗಿದೆ. ಸಂಜು ಸ್ಯಾಮ್ಸನ್ ಅವರ ಅಂತಾರಾಷ್ಟ್ರೀಯ ವೃತ್ತಿಜೀವನ ಮುಗಿದಿದೆ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಸಂಜು ಸ್ಯಾಮ್ಸನ್​ ಇದಕ್ಕೆ ಮೌನವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಫೇಸ್​ಬುಕ್​ನಲ್ಲಿ ಸ್ಮೈಲಿ ಒಂದನ್ನು ಪೋಸ್ಟ್​ ಮಾಡಿದ್ದಾರೆ. ಆದರೆ ಇದಕ್ಕೆ ಯಾವುದೇ ಕ್ಯಾಪ್ಶನ್​ ಕೊಟ್ಟಿಲ್ಲ. ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸಂಜು ಸ್ಯಾಮ್ಸ​ನ್ ಫೋಟೋ ಒಂದನ್ನು ಪೋಸ್ಟ್​ ಮಾಡಿದ್ದು, "ಅದು ಏನೇ ಆದ್ರು ಸ್ವೀಕರಿಸಿ ಮುಂದೆ ಸಾಗುವುದರ ಬಗ್ಗೆ ನನ್ನ ಗಮನ" ಎಂದು ಕ್ಯಾಪ್ಶನ್​ ಬರೆದಿದ್ದಾರೆ. ವೆಸ್ಟ್​ ಇಂಡೀಸ್​ ಸರಣಿಯಲ್ಲಿ ಕೊನೆಯದಾಗಿ ಅವಕಾಶ ಪಡೆದುಕೊಂಡಿದ್ದ ಸಂಜು ಬೆಸ್ಟ್​ ಆಟ ಪ್ರದರ್ಶಿಸುವಲ್ಲಿ ಎಡವಿದ್ದರು. ಆದರೆ ಅವರಿಗೆ ಹೆಚ್ಚು ತಂಡದಲ್ಲಿ ಅವಕಾಶ ಕೊಡದಿರುವುದೇ ಅವರು ಫಾರ್ಮ್​ ಕಂಡುಕೊಳ್ಳಲು ಸಮಸ್ಯೆ ಆಗುತ್ತಿದೆ ಎಂಬುದು ಅಭಿಮಾನಿಗಳ ವಾದ.

ಇದನ್ನೂ ಓದಿ: ಏಷ್ಯಾಕಪ್​ ಫೈನಲ್​ ಪಂದ್ಯದಲ್ಲಿ ಆಗಿದೆಯಾ ಫಿಕ್ಸಿಂಗ್?.. ತನಿಖೆಗೆ ಆಗ್ರಹಿಸಿ ಪೊಲೀಸರಿಗೆ ದೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.