ಪೊರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ವಿರುದ್ಧ ನಡೆಯಲಿರುವ ಮೂರು ಏಕದಿನ ಪಂದ್ಯಗಳ ಸರಣಿಗೋಸ್ಕರ ವೆಸ್ಟ್ ಇಂಡೀಸ್ ತಂಡ ಪ್ರಕಟಗೊಂಡಿದೆ. 13 ಆಟಗಾರರ ಬಳಗದಲ್ಲಿ ಅನುಭವಿ ಆಲ್ರೌಂಡರ್ ಜೇಸನ್ ಹೋಲ್ಡರ್ಗೆ ಅವಕಾಶ ನೀಡಲಾಗಿದೆ. ಈ ಮೂಲಕ 18 ತಿಂಗಳ ಬಳಿಕ ಏಕದಿನ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ.
ಜುಲೈ 22ರಿಂದ ಉಭಯ ತಂಡಗಳ ನಡುವೆ ಏಕದಿನ ಸರಣಿ ಆರಂಭಗೊಳ್ಳಲಿದ್ದು, ನಾಯಕನಾಗಿ ನಿಕೋಲಸ್ ಪೂರನ್ ಹಾಗೂ ಉಪನಾಯಕನಾಗಿ ಶಾಯ್ ಹೋಪ್ ತಂಡ ಮುನ್ನಡೆಸಲಿದ್ದಾರೆ. ತಂಡದಿಂದ ಆ್ಯಂಡರ್ಸನ್ ಫಿಲಿಪ್ ಹಾಗೂ ರೊಮಾರಿಯೊ ಶೆಫರ್ಡ್ಗೆ ಕೈಬಿಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಬಾಂಗ್ಲಾದೇಶದ ವಿರುದ್ಧ ನಡೆದ ಟಿ-20 ಸರಣಿಯಲ್ಲಿ ವೆಸ್ಟ್ ಇಂಡೀಸ್ 3-0 ಅಂತರದಿಂದ ಸೋಲು ಕಂಡು ಮುಖಭಂಗಕ್ಕೊಳಗಾಗಿದೆ.
ವೆಸ್ಟ್ ಇಂಡೀಸ್ ತಂಡ ಇಂತಿದೆ: ನಿಕೋಲಸ್ ಪೂರನ್(ಕ್ಯಾಪ್ಟನ್), ಶಾಯ್ ಹೋಪ್(ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ,ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶಿ ಮೋತಿ, ಕೀಮೋ ಪಾಲ್, ರೋವ್ಮನ್ ಪೊವೆಲ್, ಜೇಡನ್ ಸಿಲ್ಸ್
ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್
ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೋಸ್ಕರ ಈಗಾಗಲೇ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ತಂಡವನ್ನ ಶಿಖರ್ ಧವನ್ ಮುನ್ನಡೆಸಲಿದ್ದು, ಉಪನಾಯಕನಾಗಿ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ. ಈ ಸರಣಿಯಲ್ಲಿ ರೋಹಿತ್ ಶರ್ಮಾ, ಬುಮ್ರಾ, ಕೊಹ್ಲಿ, ಪಂತ್ ಸೇರಿದಂತೆ ಕೆಲ ಹಿರಿಯ ಪ್ಲೇಯರ್ಸ್ಗೆ ವಿಶ್ರಾಂತಿ ನೀಡಲಾಗಿದೆ.
ಇದನ್ನೂ ಓದಿರಿ: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ.. ಶಿಖರ್ ಧವನ್ ಕ್ಯಾಪ್ಟನ್
ಭಾರತ ಏಕದಿನ ತಂಡ ಇಂತಿದೆ: ಶಿಖರ್ ಧವನ್(ಕ್ಯಾಪ್ಟನ್), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್(ವಿ.ಕೀ), ಸಂಜು ಸ್ಯಾಮ್ಸನ್(ವಿ.ಕೀ), ರವೀಂದ್ರ ಜಡೇಜಾ(ಉಪನಾಯಕ), ಶಾರ್ದೂಲ್ ಠಾಕೂರ್. ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಆವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್