ಎಡ್ಜ್ಬಾಸ್ಟನ್(ಇಂಗ್ಲೆಂಡ್): ನಾಳೆಯಿಂದ ಬರ್ಮಿಂಗ್ಹ್ಯಾಮ್ನಲ್ಲಿ ಇಂಗ್ಲೆಂಡ್ ವಿರುದ್ಧ ಆರಂಭಗೊಳ್ಳಲಿರುವ 5ನೇ ಟೆಸ್ಟ್ ಪಂದ್ಯಕ್ಕಾಗಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ನಾಯಕರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ಮಂಡಳಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಉಪನಾಯಕನಾಗಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾರ್ಯನಿರ್ವಹಿಸುವರು.
ಟೆಸ್ಟ್ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ಅವರಿಗೆ ಕೋವಿಡ್ ದೃಢಪಟ್ಟಿರುವ ಕಾರಣ ಯಾರ್ಕರ್ ಕಿಂಗ್ ಬುಮ್ರಾಗೆ ತಂಡ ಮುನ್ನಡೆಸುವ ಅಪೂರ್ವ ಅವಕಾಶ ಸಿಕ್ಕಿದೆ. ಈ ಮೂಲಕ ಕಪಿಲ್ ದೇವ್ ಬಳಿಕ ಅಂದರೆ 35 ವರ್ಷಗಳ ಬಳಿಕ ಭಾರತದ ಟೆಸ್ಟ್ ತಂಡಕ್ಕೆ ವೇಗಿಯೋರ್ವರು ನಾಯಕರಾಗಿದ್ದಾರೆ.
ಇದನ್ನೂ ಓದಿ: ಭಾರತದ ವಿರುದ್ಧ 5ನೇ ಟೆಸ್ಟ್ ಪಂದ್ಯ: ಬಲಿಷ್ಠ ಆಡುವ 11ರ ಬಳಗ ಪ್ರಕಟಿಸಿದ ಇಂಗ್ಲೆಂಡ್
ಟೀಂ ಇಂಡಿಯಾ ಹೀಗಿದೆ: ಜಸ್ಪ್ರೀತ್ ಬುಮ್ರಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ಉಪನಾಯಕ) (WK), ಕೆ.ಎಸ್.ಭರತ್ (WK), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ, ಮಯಾಂಕ್ ಅಗರ್ವಾಲ್
-
NEWS 🚨 - @Jaspritbumrah93 to lead #TeamIndia in the fifth Test Match against England.@RishabhPant17 will be the vice-captain for the match.#ENGvIND pic.twitter.com/ueWXfOMz1L
— BCCI (@BCCI) June 30, 2022 " class="align-text-top noRightClick twitterSection" data="
">NEWS 🚨 - @Jaspritbumrah93 to lead #TeamIndia in the fifth Test Match against England.@RishabhPant17 will be the vice-captain for the match.#ENGvIND pic.twitter.com/ueWXfOMz1L
— BCCI (@BCCI) June 30, 2022NEWS 🚨 - @Jaspritbumrah93 to lead #TeamIndia in the fifth Test Match against England.@RishabhPant17 will be the vice-captain for the match.#ENGvIND pic.twitter.com/ueWXfOMz1L
— BCCI (@BCCI) June 30, 2022
28ರ ಹರೆಯದ ಬುಮ್ರಾ ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉಪನಾಯಕನಾಗಿ ಕಾರ್ಯನಿರ್ವಹಿಸಿದ್ದು, ಇದೀಗ ನಾಯಕತ್ವ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿಯವರೆಗೆ ಬುಮ್ರಾ 29 ಟೆಸ್ಟ್ ಪಂದ್ಯಗಳನ್ನಾಡಿದ್ದು, ನಾಯಕತ್ವ ಜವಾಬ್ದಾರಿಯ ಅನುಭವ ಹೊಂದಿಲ್ಲ.
ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಕೊನೆಯ ಪಂದ್ಯದಲ್ಲಿ ಗೆಲುವು ಅಥವಾ ಡ್ರಾ ಸಾಧಿಸಿದಾಗ ಮಾತ್ರ ಸರಣಿ ಭಾರತದ ಪಾಲಾಗಲಿದೆ.
-
Test MODE 🔛 🤍#TeamIndia | #ENGvIND pic.twitter.com/LJBzTWDaIp
— BCCI (@BCCI) June 30, 2022 " class="align-text-top noRightClick twitterSection" data="
">Test MODE 🔛 🤍#TeamIndia | #ENGvIND pic.twitter.com/LJBzTWDaIp
— BCCI (@BCCI) June 30, 2022Test MODE 🔛 🤍#TeamIndia | #ENGvIND pic.twitter.com/LJBzTWDaIp
— BCCI (@BCCI) June 30, 2022
ಕಳೆದ ಸೆಪ್ಟೆಂಬರ್‌ನಲ್ಲಿ ಓವಲ್‌ನಲ್ಲಿ ನಡೆದಿದ್ದ 4ನೇ ಟೆಸ್ಟ್ ಪಂದ್ಯದ ವೇಳೆ ತಂಡದ ಕೋಚ್ ರವಿ ಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಬ್ಯಾಟಿಂಗ್ ಕೋಚ್ ಶ್ರೀಧರ್, ಫಿಸಿಯೋ ಸೇರಿದಂತೆ ಹಲವರಿಗೆ ಕೋವಿಡ್ ತಗುಲಿತ್ತು. ಹೀಗಾಗಿ, 5ನೇ ಪಂದ್ಯ ರದ್ದುಗೊಳಿಸಿ, ಪ್ಲೇಯರ್ಸ್ ಸ್ವದೇಶಕ್ಕೆ ವಾಪಸ್ ಆಗಿದ್ದರು. ಭಾರತ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯಕ್ಕಾಗಿ ಈಗಾಗಲೇ ಇಂಗ್ಲೆಂಡ್ ತಂಡ ಆಡುವ 11ರ ಬಳಗವನ್ನು ಪ್ರಕಟಿಸಿದೆ.