ಎಡ್ಜ್ಬಾಸ್ಟನ್(ಲಂಡನ್): ಜುಲೈ 1ರಿಂದ ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ 5ನೇ ಟೆಸ್ಟ್ ಪಂದ್ಯ ಆಡಲು ಸಜ್ಜಾಗಿದೆ. ಈ ಪಂದ್ಯದಿಂದ ನಾಯಕ ರೋಹಿತ್ ಶರ್ಮಾ ಹೊರಬಿದ್ದಿದ್ದು, ನಾಯಕತ್ವದ ಜವಾಬ್ದಾರಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೆಗಲಿಗೆ ಬಿದ್ದಿದೆ ಎಂದು ವರದಿಯಾಗಿದೆ. ಕೋವಿಡ್ನಿಂದ ರೋಹಿತ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
28ರ ಹರೆಯದ ಬುಮ್ರಾ ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉಪನಾಯಕನಾಗಿ ಕಾರ್ಯನಿರ್ವಹಿಸಿದ್ದು, ನಾಯಕತ್ವ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿಯವರೆಗೆ ಬುಮ್ರಾ 29 ಟೆಸ್ಟ್ ಪಂದ್ಯಗಳನ್ನಾಡಿದ್ದು, ನಾಯಕತ್ವ ಜವಾಬ್ದಾರಿಯ ಅನುಭವ ಹೊಂದಿಲ್ಲ. ಇವರಿಗೆ ಸಾಥ್ ನೀಡಲು ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಚೇತೇಶ್ವರ್ ಪೂಜಾರಾ ಇದ್ದಾರೆ.
-
Rohit Sharma will miss the fifth test (against England) and Jasprit Bumrah will lead the Indian side. He has been informed about this in the team meeting: Sources
— ANI (@ANI) June 29, 2022 " class="align-text-top noRightClick twitterSection" data="
(File Pic) pic.twitter.com/AvJRstH6Lq
">Rohit Sharma will miss the fifth test (against England) and Jasprit Bumrah will lead the Indian side. He has been informed about this in the team meeting: Sources
— ANI (@ANI) June 29, 2022
(File Pic) pic.twitter.com/AvJRstH6LqRohit Sharma will miss the fifth test (against England) and Jasprit Bumrah will lead the Indian side. He has been informed about this in the team meeting: Sources
— ANI (@ANI) June 29, 2022
(File Pic) pic.twitter.com/AvJRstH6Lq
ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೇ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಕೊನೆಯ ಪಂದ್ಯದಲ್ಲಿ ಗೆಲುವು ಅಥವಾ ಡ್ರಾ ಸಾಧಿಸಿದಾಗ ಮಾತ್ರ ಸರಣಿ ಭಾರತದ ಪಾಲಾಗಲಿದೆ.
ಭಾರತದ ತಂಡ ಇಂತಿದೆ: ಶುಬ್ಮನ್ ಗಿಲ್, ಮಯಾಂಕ್ ಅಗರವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಭ್ ಪಂತ್(ವಿ.ಕೀ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ, ಶ್ರೀಕಾರ್ ಭರತ್