ರಾಂಚಿ(ಜಾರ್ಖಂಡ್): ಭಾರತದ ವಿರುದ್ಧ ರಾಂಚಿಯಲ್ಲಿ ಶುಕ್ರವಾರ ನಡೆಯಲಿರುವ 2ನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ನ ಆರಂಭಿಕ ಮಾರ್ಟಿನ್ ಗಪ್ಟಿಲ್ ಕೇವಲ 11 ರನ್ಗಳಿಸಿದರೆ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಹೆಚ್ಚು ರನ್ಗಳಿಸಿ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ 95 ಪಂದ್ಯಗಳನ್ನಾಡಿದ್ದು 52ರ ಸರಾಸರಿಯಲ್ಲಿ 29 ಅರ್ಧಶತಕಗಳ ಸಹಿತ 3227 ರನ್ ಸಂಪಾದಿಸಿದ್ದಾರೆ. ನಾಳೆ ನಡೆಯುವ ಪಂದ್ಯದಲ್ಲಿ ಮಾರ್ಟಿನ್ ಗಪ್ಟಿಲ್ ಕೇವಲ 11 ರನ್ ಗಳಿಸಿದರೆ ಕೊಹ್ಲಿ ಹಿಂದಿಕ್ಕಿ ಟಿ20 ಕ್ರಿಕೆಟ್ನ ಸಾರ್ವಕಾಲಿಕ ಗರಿಷ್ಠ ಸ್ಕೋರರ್ ಆಗಲಿದ್ದಾರೆ.
ಮಾರ್ಟಿನ್ ಗಪ್ಟಿಲ್ 110 ಪಂದ್ಯಗಳನ್ನಾಡಿದ್ದು 3217 ರನ್ಗಳಿಸಿದ್ದಾರೆ. ಗಪ್ಟಿಲ್ 19 ಅರ್ಧಶತಕ ಮತ್ತು 2 ಶತಕ ಬಾರಿಸಿದ್ದಾರೆ. 3ನೇ ಸ್ಥಾನದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಇದ್ದು, ಅವರು 117 ಪಂದ್ಯಗಳಿಂದ 3096 ರನ್ ಗಳಿಸಿದ್ದಾರೆ. ಅವರ ಖಾತೆಯಲ್ಲಿ 24 ಅರ್ಧಶತಕ ಮತ್ತು 4 ಶತಕಗಳು ಸೇರಿವೆ.
ಆಸ್ಟ್ರೇಲಿಯಾ ನಾಯಕ ಆ್ಯರೋನ್ ಫಿಂಚ್ 83 ಪಂದ್ಯಗಳಿಂದ 2608 ಐರ್ಲೆಂಡ್ನ ಪಾಲ್ ಸ್ಟಿರ್ಲಿಂಗ್ 92 ಪಂದ್ಯಗಳಿಂದ 2570, ಡೇವಿಡ್ ವಾರ್ನರ್ 88 ಪಂದ್ಯಗಳಿಂದ 2554, ಪಾಕಿಸ್ತಾನ ಮೊಹಮ್ಮದ್ ಹಫೀಜ್ 119 ಪಂದ್ಯಗಳಿಂದ 2514, ಬಾಬರ್ ಅಜಮ್ 67 ಪಂದ್ಯಗಳಿಂದ 2507 ರನ್ ಗಳಿಸಿ ನಂತರದ ಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ:ಎರಡು ದೇಶಗಳ ಪರ ಆಡಿ ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದ ಕಿವೀಸ್ ಬ್ಯಾಟರ್