ಕಾನ್ಪುರ(ಉತ್ತರ ಪ್ರದೇಶ): ಭಾರತ ಕ್ರಿಕೆಟ್ ತಂಡದ ಸದಸ್ಯ ಕುಲದೀಪ್ ಯಾದವ್ ಅವರು ತಾವು ಸ್ಲಾಟ್ ಕಾಯ್ದಿರಿಸಿದ ಆಸ್ಪತ್ರೆಯನ್ನು ಹೊರತುಪಡಿಸಿ ಬೇರೆ ಸ್ಥಳದಲ್ಲಿ ಕೊರೊನಾ ವೈರಸ್ ಲಸಿಕೆ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾಡಳಿತ ಆದೇಶಿಸಿದೆ.
-
जब भी मौका मिले तुरंत टीका लगवाएं। सुरक्षित रहें क्योंकि covid19 के खिलाफ लड़ाई में एकजुट होने की आवश्यकता है 🙏🏻 pic.twitter.com/6YSHyoGmWM
— Kuldeep yadav (@imkuldeep18) May 15, 2021 " class="align-text-top noRightClick twitterSection" data="
">जब भी मौका मिले तुरंत टीका लगवाएं। सुरक्षित रहें क्योंकि covid19 के खिलाफ लड़ाई में एकजुट होने की आवश्यकता है 🙏🏻 pic.twitter.com/6YSHyoGmWM
— Kuldeep yadav (@imkuldeep18) May 15, 2021जब भी मौका मिले तुरंत टीका लगवाएं। सुरक्षित रहें क्योंकि covid19 के खिलाफ लड़ाई में एकजुट होने की आवश्यकता है 🙏🏻 pic.twitter.com/6YSHyoGmWM
— Kuldeep yadav (@imkuldeep18) May 15, 2021
ವರದಿಗಳ ಪ್ರಕಾರ, ಯಾದವ್ ಅವರು ಗೋವಿಂದ್ ನಗರದ ಜಗೇಶ್ವರ ಆಸ್ಪತ್ರೆಯಲ್ಲಿ ಕೋವಿಡ್ ಡೋಸ್ ಪಡೆಯಬೇಕಿತ್ತು. ಆದರೆ ಅವರು ಕಾನ್ಪುರ ನಗರ ನಿಗಮ್ ಅತಿಥಿಗೃಹದಲ್ಲಿ ಲಸಿಕೆ ಪಡೆದಿರುವ ಸಂದೇಹದ ಬಗ್ಗೆ ಅಲ್ಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಎಡಿಎಂ ಅತುಲ್ ಕುಮಾರ್ ಅವರಿಗೆ ಸೂಚಿಸಲಾಗಿದೆ ಎಂದು ಕಾನ್ಪುರ ಜಿಲ್ಲಾಧಿಕಾರಿ ಅಲೋಕ್ ತಿವಾರಿ ತಿಳಿಸಿದ್ದಾರೆ.
ಶನಿವಾರ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದ ಕುಲದೀಪ್ ಯಾದವ್ ತಮ್ಮ ಟ್ವಿಟರ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋವನ್ನ ಹಂಚಿಕೊಂಡಿದ್ದರು. ಕೊರೊನಾ ವಿರುದ್ಧದ ಹೋರಾಟಕ್ಕೆ ಎಲ್ಲರೂ ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದ್ದರು.