ಲಂಡನ್: ಇಂಗ್ಲೆಂಡ್ ವಿರುದ್ಧ ಓವಲ್ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಕರ್ನಾಟಕದ ವೇಗದ ಬೌಲರ್ ಪ್ರಸಿಧ್ ಕೃಷ್ಣ ಭಾರತ ತಂಡಕ್ಕೆ ಸೇರಿಕೊಂಡಿದ್ದಾರೆ ಎಂದು ಬಿಸಿಸಿಐ ಬುಧವಾರ ಖಚಿತಪಡಿಸಿದೆ.
ಗುರುವಾರದಿಂದ ಓವಲ್ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ 4ನೇ ಟೆಸ್ಟ್ ಪಂದ್ಯ ನಡೆಯಲಿದೆ. ಎರಡು ತಂಡಗಳು ತಲಾ ಒಂದು ಟೆಸ್ಟ್ ಪಂದ್ಯ ಗೆದ್ದು 1-1ರಲ್ಲಿ ಸರಣಿ ಸಮಬಲ ಸಾಧಿಸಿವೆ.
-
UPDATE - Prasidh Krishna added to India’s squad
— BCCI (@BCCI) September 1, 2021 " class="align-text-top noRightClick twitterSection" data="
More details here - https://t.co/Bun5KzLw9G #ENGvIND pic.twitter.com/IO4JWtmwnF
">UPDATE - Prasidh Krishna added to India’s squad
— BCCI (@BCCI) September 1, 2021
More details here - https://t.co/Bun5KzLw9G #ENGvIND pic.twitter.com/IO4JWtmwnFUPDATE - Prasidh Krishna added to India’s squad
— BCCI (@BCCI) September 1, 2021
More details here - https://t.co/Bun5KzLw9G #ENGvIND pic.twitter.com/IO4JWtmwnF
ಟೀಮ್ ಮ್ಯಾನೇಜ್ಮೆಂಟ್ ಮನವಿ ಮೇರೆಗೆ ಭಾರತದ ಆಯ್ಕೆ ಸಮಿತಿ ವೇಗದ ಬೌಲರ್ ಪ್ರಸಿಧ್ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.
ಪ್ರಸಿಧ್ ಹೆಚ್ಚುವರಿ ಬೌಲರ್ ಆಗಿ ಟೀಮ್ ಇಂಡಿಯಾ ಜೊತೆ ಇಂಗ್ಲೆಂಡ್ಗೆ ಪ್ರವಾಸ ಬೆಳೆಸಿದ್ದರು. ಇದೀಗ ನಾಲ್ಕನೇ ಟೆಸ್ಟ್ಗೆ ಪದಾರ್ಪಣೆ ಮಾಡುವ ಸಾಧ್ಯತೆಯಿದೆ. ಕೃಷ್ಣ ಮಾರ್ಚ್ 23, 2021ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು. ಅವರು ಭಾರತದ ಪರ 3 ಏಕದಿನ ಪಂದ್ಯಗಳಿಂದ 6 ವಿಕೆಟ್ ಪಡೆದಿದ್ದಾರೆ. 9 ಪ್ರಥಮ ದರ್ಜೆ ಪಂದ್ಯಗಳಿಂದ 34 ವಿಕೆಟ್ ಪಡೆದಿದ್ದಾರೆ.
ನಾಲ್ಕನೇ ಟೆಸ್ಟ್ಗೆ ಭಾರತ ತಂಡ:
ರೋಹಿತ್ ಶರ್ಮಾ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ (ಉಪ ನಾಯಕ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ , ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ಪ್ರಸಿದ್ ಕೃಷ್ಣ
ಸ್ಟ್ಯಾಂಡ್‌ಬೈ ಪ್ಲೇಯರ್: ಅರ್ಜಾನ್ ನಾಗ್ವಾಸ್ವಾಲಾ
ಇದನ್ನು ಓದಿ:ICC Test Rankings: ಕೊಹ್ಲಿ ಹಿಂದಿಕ್ಕಿದ ರೋಹಿತ್, 6 ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರಿದ ರೂಟ್