ಕೋಲ್ಕತ್ತಾ(ಪಶ್ಚಿಮ ಬಂಗಾಳ) : 2022ರ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬೌಲಿಂಗ್ ಕೋಚ್ ಆಗಿ ಭರತ್ ಅರುಣ್ ನೇಮಕವಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಫ್ರಾಂಚೈಸಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದೆ.
2014ರಿಂದಲೂ ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಿರುವ ಅರುಣ್, ಅನೇಕ ಮಹತ್ವದ ಪಂದ್ಯಗಳಲ್ಲಿ ಬೌಲರ್ಗಳಿಗೆ ದಾರಿ ತೋರುವ ಮೂಲಕ ತಂಡವನ್ನ ಗೆಲುವಿನ ದಡ ಸೇರಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ಕೋಚ್ ರವಿಶಾಸ್ತ್ರಿ ಜೊತೆ ಭರತ್ ಅರುಣ್ ಕೂಡ ಟೀಂ ಇಂಡಿಯಾ ಬೌಲಿಂಗ್ ಕೋಚ್ ಹುದ್ದೆ ತೊರೆದಿದ್ದಾರೆ.
-
🚨 𝘼𝙉𝙉𝙊𝙐𝙉𝘾𝙀𝙈𝙀𝙉𝙏 🚨
— KolkataKnightRiders (@KKRiders) January 14, 2022 " class="align-text-top noRightClick twitterSection" data="
We are delighted to introduce you to our new bowling coach! Welcome to the Knight Riders family, Bharat Arun 💜💛#KKR #AmiKKR #IPL2022 #BharatArun pic.twitter.com/MpAXJMa67C
">🚨 𝘼𝙉𝙉𝙊𝙐𝙉𝘾𝙀𝙈𝙀𝙉𝙏 🚨
— KolkataKnightRiders (@KKRiders) January 14, 2022
We are delighted to introduce you to our new bowling coach! Welcome to the Knight Riders family, Bharat Arun 💜💛#KKR #AmiKKR #IPL2022 #BharatArun pic.twitter.com/MpAXJMa67C🚨 𝘼𝙉𝙉𝙊𝙐𝙉𝘾𝙀𝙈𝙀𝙉𝙏 🚨
— KolkataKnightRiders (@KKRiders) January 14, 2022
We are delighted to introduce you to our new bowling coach! Welcome to the Knight Riders family, Bharat Arun 💜💛#KKR #AmiKKR #IPL2022 #BharatArun pic.twitter.com/MpAXJMa67C
ಟೀಂ ಇಂಡಿಯಾ ಪರ ಟೆಸ್ಟ್, ಏಕದಿನ ಪಂದ್ಯಗಳಲ್ಲಿ ಬೌಲರ್ ಆಗಿ ಗುರುತಿಸಿಕೊಂಡಿದ್ದ ಇವರು, ತಮಿಳುನಾಡು ತಂಡದ ಪರ ದೇಶೀಯ ಕ್ರಿಕೆಟ್‌ನಲ್ಲೂ ಮಿಂಚಿದ್ದಾರೆ.
ಇದನ್ನೂ ಓದಿರಿ: ಡಿಆರ್ಎಸ್ ವಿವಾದ: ಟೀಂ ಇಂಡಿಯಾ ಹತಾಶೆ & ಒತ್ತಡದಲ್ಲಿದೆ ಎಂದ ಲುಂಗಿ ಎಂಗಿಡಿ
ಕೆಕೆಆರ್ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಂಡದ ಕೋಚ್ ಆಗಿರುವ ಬ್ರೆಡಂ ಮೆಕ್ಕಲಂ, ಭರತ್ ಅರುಣ್ಗೆ ವೆಲ್ಕಮ್ ಮಾಡಿಕೊಂಡಿದ್ದು, ಜೊತೆಯಾಗಿ ಕೆಲಸ ಮಾಡುವ ಮೂಲಕ ತಂಡವನ್ನ ಯಶಸ್ಸಿನತ್ತ ತೆಗೆದುಕೊಂಡು ಹೋಗಲು ಉತ್ಸುಕನಾಗಿದ್ದೇನೆ ಎಂದಿದ್ದಾರೆ.
ತಮಿಳುನಾಡು ಕ್ರಿಕೆಟ್ ತಂಡದ ಕೋಚ್ ಆಗಿದ್ದ ಭರತ್ ಅರುಣ್ ತದನಂತರ ರಾಷ್ಟ್ರೀಯ ಕ್ರಿಕೆಟ್ ಅಕ್ಯಾಡೆಮಿ ಬೆಂಗಳೂರಿನಲ್ಲಿ ಮುಖ್ಯ ಬೌಲಿಂಗ್ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಇದಾದ ಬಳಿಕ ಅಂಡರ್-19 ತಂಡದ ಮುಖ್ಯ ಕೋಚ್ ಆಗಿದ್ದರು. ಇದಾದ ಬಳಿಕ ಟೀಂ ಇಂಡಿಯಾ ಹಿರಿಯರ ತಂಡದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡು ಸೇವೆ ಸಲ್ಲಿಸಿದ್ದಾರೆ.