ಅಬು ಧಾಬಿ: ಇಂಡಿಯನ್ ಪ್ರೀಮಿಯರ್ ಲೀಗ್ನ 38ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಇಯಾನ್ ಮಾರ್ಗನ್ ಸಿಎಸ್ಕೆ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ಕೆಕೆಆರ್ ಯಾವುದೇ ಬದಲಾವಣೆಯಿಲ್ಲದೆ ಕಣಕ್ಕಿಳಿಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಡ್ವೇನ್ ಬ್ರಾವೋಗೆ ವಿಶ್ರಾಂತಿ ನೀಡಿ ಇಂಗ್ಲೆಂಡ್ನ ಯುವ ಆಲ್ರೌಂಡರ್ ಸ್ಯಾಮ್ ಕರ್ರನ್ಗೆ ವಿಶ್ರಾಂತಿ ನೀಡಿದೆ.
ಎರಡೂ ತಂಡಗಳು ಯುಎಇನಲ್ಲಿ ಆಡಿರುವ ತಮ್ಮ ಎರಡೂ ಪಂದ್ಯಗಳಲ್ಲೂ ಗೆಲುವು ಸಾಧಿಸಿದೆ. ಸಿಎಸ್ಕೆ ತಂಡ ಈ ಪಂದ್ಯ ಗೆದ್ದರೆ ನೇರವಾಗಿ ಪ್ಲೇ ಆಫ್ಗೆ ಎಂಟ್ರಿ ಕೊಡಲಿದೆ. ಕೆಕೆಆರ್ ತನ್ನ ಪ್ಲೇ ಆಫ್ ಕನಸನ್ನು ಉಳಿಸಿಕೊಳ್ಳಬೇಕಾದರೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಕಳೆದ ಎರಡು ಪಂದ್ಯಗಳಲ್ಲಿ ಸಿಎಸ್ಕೆ ಮತ್ತು ಕೆಕೆಆರ್ ತಂಡಗಳು ಬಲಿಷ್ಠ ಮುಂಬೈ ಮತ್ತು ಆರ್ಸಿಬಿ ವಿರುದ್ಧ ಗೆಲುವು ಸಾಧಿಸಿವೆ. ಹಾಗಾಗಿ ಇಂದಿನ ಪಂದ್ಯದಲ್ಲಿ ರೋಚಕವಾಗಿರಲಿದೆ.
ಚೆನ್ನೈ ತಂಡ ಆಡಿರುವ 9 ಪಂದ್ಯಗಳಲ್ಲಿ 7 ಗೆಲುವು ಮತ್ತು 2 ಸೋಲುಗಳೊಂದಿಗೆ 14 ಅಂಕ ಪಡೆದು 2ನೇ ಸ್ಥಾನದಲ್ಲಿದೆ. +1.185 ರನ್ರೇಟ್ ಹೊಂದಿದೆ. ಈ ಪಂದ್ಯ ಗೆದ್ದರೆ ಅಗ್ರಸ್ಥಾನಕ್ಕೇರುವ ಜೊತೆಗೆ ಪ್ಲೇ ಆಫ್ಗೆ ಹತ್ತಿರವಾಗಲಿದೆ. ಇತ್ತ ಕೆಕೆಆರ್ ಆಡಿರುವ 9 ಪಂದ್ಯಗಳಲ್ಲಿ 4 ಗೆಲುವು ಮತ್ತು 5 ಸೋಲು ಕಂಡಿದ್ದು 8 ಅಂಕದೊಡನೆ ನಾಲ್ಕನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಗೆದ್ದರೆ ಆರ್ಸಿಬಿಯನ್ನು ಹಿಂದಿಕ್ಕಿ 3ನೇ ಸ್ಥಾನ ಪಡೆದುಕೊಳ್ಳಲಿದೆ.
ಮುಖಾಮುಖಿ: ಎರಡು ತಂಡಗಳು 23 ಪಂದ್ಯಗಳಲ್ಲಿ ಎದುರುಬದುರಾಗಿದ್ದು ಸಿಎಸ್ಕೆ 15 ಹಾಗೂ ಕೆಕೆಆರ್ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.
ತಂಡಗಳು:
ಸಿಎಸ್ಕೆ: ಫಾಪ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್. ಧೋನಿ (ನಾಯಕ/ವಿ.ಕೀ), ರವೀಂದ್ರ ಜಡೇಜಾ, ಸ್ಯಾಮ್ ಕರ್ರನ್, ಶಾರ್ದುಲ್ ಠಾಕೂರ್, ದೀಪಕ್ ಚಹರ್, ಹೆಜಲ್ವುಡ್.
ಕೆಕೆಆರ್: ವೆಂಕಟೇಶ್ ಅಯ್ಯರ್, ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್),ಆ್ಯಂಡ್ರೆ ರಸೆಲ್, ಸುನೀಲ್ ನರೈನ್, ಫರ್ಗುಸನ್, ವರುಣ್ ಚಕ್ರವರ್ತಿ, ಪ್ರಸಿಧ್ ಕೃಷ್ಣ.