ಜೋಹಾನ್ಸ್ಬರ್ಗ್: ಇಲ್ಲಿನ ವಾಂಡರರ್ಸ್ ಮೈದಾನದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಿಂದ ಬೆನ್ನು ನೋವಿನಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದು, ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಟಾಸ್ ಗೆದ್ದಿರುವ ಅವರು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಮೊದಲ ಪಂದ್ಯದಲ್ಲಿ ಗೆದ್ದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ, ವಾಂಡರರ್ಸ್ನಲ್ಲಿ ಜಯ ಸಾಧಿಸಿ ಸರಣಿ ಗೆಲ್ಲುವ ಗುರಿ ಹೊಂದಿದೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಹನುಮ ವಿಹಾರಿಗೆ ಅವಕಾಶ ಲಭಿಸಿದೆ. ಕನ್ನಡಿದ ಕೆಎಲ್ ರಾಹುಲ್ಗೆ ಮೊದಲ ಬಾರಿಗೆ ದೇಶದ ಟೆಸ್ಟ್ ತಂಡ ಮುನ್ನಡೆಸುವ ಅವಕಾಶ ಲಭಿಸಿದೆ.
-
Toss Update - KL Rahul has won the toss and elects to bat first in the 2nd Test.
— BCCI (@BCCI) January 3, 2022 " class="align-text-top noRightClick twitterSection" data="
Captain Virat Kohli misses out with an upper back spasm.#SAvIND pic.twitter.com/2YarVIea4H
">Toss Update - KL Rahul has won the toss and elects to bat first in the 2nd Test.
— BCCI (@BCCI) January 3, 2022
Captain Virat Kohli misses out with an upper back spasm.#SAvIND pic.twitter.com/2YarVIea4HToss Update - KL Rahul has won the toss and elects to bat first in the 2nd Test.
— BCCI (@BCCI) January 3, 2022
Captain Virat Kohli misses out with an upper back spasm.#SAvIND pic.twitter.com/2YarVIea4H
ಇನ್ನುಳಿದಂತೆ ಭಾರತವು ಮೊದಲ ಪಂದ್ಯವನ್ನಾಡಿದ ಆಟಗಾರರನ್ನೇ ಮುಂದುವರೆಸಿದೆ. ಹರಿಣಗಳ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಡಿಕಾಕ್ ನಿವೃತ್ತಿ ಹಿನ್ನೆಲೆಯಲ್ಲಿ ವಿಕೆಟ್ ಕೀಪರ್ ಆಗಿ ಕೈಲ್ ವೆರ್ರೆನ್ ಹಾಗೂ ಡೌನ್ನೆ ಮಡ್ಲರ್ ಬದಲಿಗೆ ಡುವಾನ್ನೆ ಒಲಿವಿಯರ್ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಎರಡೂ ತಂಡಗಳ 11ರ ಬಳಗ ಹೀಗಿದೆ:
ದಕ್ಷಿಣ ಆಫ್ರಿಕಾ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ (ವಿ.ಕೀ), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ
ಭಾರತ: ಕೆಎಲ್ ರಾಹುಲ್ (ನಾಯಕ), ಮಯಾಂಕ್ ಅಗರವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್ (ವಿ.ಕೀ), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾಕ್ ಆಲ್‌ರೌಂಡರ್ ಮೊಹಮ್ಮದ್ ಹಫೀಜ್ ಗುಡ್ ಬೈ