ಬೆಂಗಳೂರು: ಶಸ್ತ್ರಚಿಕಿತ್ಸೆಗೊಳಗಾಗಿ ಗುಣಮುಖರಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದ ಕೆಎಲ್ ರಾಹುಲ್ಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಲಭ್ಯರಾಗುವುದು ದೌಟ್ ಎನ್ನಲಾಗ್ತಿದೆ. ಇದರ ಬೆನ್ನಲ್ಲೇ ತರಬೇತಿ ವೇಳೆ ಗಾಯಗೊಂಡಿರುವ ರವೀಂದ್ರ ಜಡೇಜಾ ಕೂಡ ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗ್ತಿದೆ.
ನಾಳೆ ಭಾರತ - ವೆಸ್ಟ್ ಇಂಡೀಸ್ ತಂಡಗಳ ಮಧ್ಯೆ ಮೊದಲ ಏಕದಿನ ಪಂದ್ಯ ನಡೆಯಲಿದೆ. ಮೊಣಕಾಲಿನ ನೋವಿಗೊಳಗಾಗಿರುವ ರವೀಂದ್ರ ಜಡೇಜಾ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ನಾಳೆಯ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ. ಮುಂಬರುವ ಟಿ-20 ವಿಶ್ವಕಪ್ ದೃಷ್ಟಿಯಿಂದ ಜಡೇಜಾಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಇನ್ನೂ ಬೆಂಗಳೂರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿರುವ ರಾಹುಲ್ಗೆ ಕೋವಿಡ್ ದೃಢಗೊಂಡಿದೆ. ಹೀಗಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಟಿ -20 ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗ್ತಿದೆ.
ತರಬೇತಿ ಪಡೆದುಕೊಳ್ಳುತ್ತಿದ್ದ ರಾಹುಲ್ಗೆ ಮುಂದಿನ ಎರಡು ದಿನಗಳಲ್ಲಿ ಯೋಯೋ ಟೆಸ್ಟ್ನಲ್ಲಿ ಭಾಗಿಯಾಗಬೇಕಾಗಿತ್ತು. ಆದರೆ, ಇದೀಗ ಕೋವಿಡ್ ಕಾಣಿಸಿಕೊಂಡಿದ್ದರಿಂದ ಅವರು ಮತ್ತಷ್ಟು ದಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಇನ್ನು ಭಾರತ ಮಹಿಳಾ ತಂಡದ ಸದಸ್ಯೆಗೂ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
-
'West Indies is a great opportunity for the youngsters to get exposure and play, says #TeamIndia ODI Captain @SDhawan25 ahead of #WIvIND series. pic.twitter.com/PBelvII28c
— BCCI (@BCCI) July 21, 2022 " class="align-text-top noRightClick twitterSection" data="
">'West Indies is a great opportunity for the youngsters to get exposure and play, says #TeamIndia ODI Captain @SDhawan25 ahead of #WIvIND series. pic.twitter.com/PBelvII28c
— BCCI (@BCCI) July 21, 2022'West Indies is a great opportunity for the youngsters to get exposure and play, says #TeamIndia ODI Captain @SDhawan25 ahead of #WIvIND series. pic.twitter.com/PBelvII28c
— BCCI (@BCCI) July 21, 2022
ನಾಳೆಯ ಪಂದ್ಯಕ್ಕಾಗಿ ಶಿಖರ್ ಧವನ್ ನೇತೃತ್ವದಲ್ಲಿ ಯಂಗ್ ಇಂಡಿಯಾ ಅಭ್ಯಾಸ ನಡೆಸಿತ್ತು. ಈ ಪಂದ್ಯದಲ್ಲಿ ಹೊಸ ಹೊಸ ಯುವ ಪ್ರತಿಭೆಗಳು ಚಾನ್ಸ್ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.