ಮುಂಬೈ : ಭಾರತದ ಆರಂಭಿಕ ಬ್ಯಾಟರ್ ಹಾಗೂ ಕನ್ನಡಿಗ ಕೆ ಎಲ್ ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಮುಂಬರುವ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಪನಾಯಕನಾಗಿ ನೇಮಕಗೊಂಡಿದ್ದಾರೆ.
ಕಳೆದ ವಾರ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಘೋಷಿಸಿದ ಟೆಸ್ಟ್ ತಂಡದಲ್ಲಿ ಅಜಿಂಕ್ಯ ರಹಾನೆ ಅವರನ್ನು ಉಪನಾಯಕನ ಸ್ಥಾನದಿಂದ ಕೆಳಗಿಳಿಸಿ ಸೀಮಿತ ಓವರ್ಗಳ ನಾಯಕ ರೋಹಿತ್ ಶರ್ಮಾ ಅವರನ್ನು ಉಪನಾಯಕನಾಗಿ ಆಯ್ಕೆ ಮಾಡಲಾಗಿತ್ತು. ಆದರೆ, ರೋಹಿತ್ ಶರ್ಮಾ ಹ್ಯಾಮ್ಸ್ಟ್ರಿಂಗ್(ಸ್ನಾಯು ಸೆಳೆತ) ಗಾಯಕ್ಕೆ ತುತ್ತಾಗಿದ್ದರಿಂದ ಟೆಸ್ಟ್ ಸರಣಿಯಿಂದ ಹೊರ ಬಿದ್ದಿದ್ದಾರೆ. ಹಾಗಾಗಿ, ವಿರಾಟ್ ಕೊಹ್ಲಿಗೆ ಉಪನಾಯಕನಾಗಿ ರಾಹುಲ್ರನ್ನು ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ಮೂಲ ಎಎನ್ಐಗೆ ತಿಳಿಸಿದೆ.
ಗಾಯಾಳು ರೋಹಿತ್ ಶರ್ಮಾ ಸರಣಿಯಲ್ಲಿ ಆಡುತ್ತಿಲ್ಲ. ಹೀಗಾಗಿ ಕೆ ಎಲ್ ರಾಹುಲ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ ಎಂದು ಮೂಲ ತಿಳಿಸಿದೆ. ಟೀಂ ಇಂಡಿಯಾ ಯುವ ನಾಯಕ ರೋಹಿತ್ ಶರ್ಮಾ ಮುಂಬೈನಲ್ಲಿ ತರಬೇತಿ ನಡೆಸುತ್ತಿದ್ದ ವೇಳೆ ಎಡಗಾಲು ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ.
ಹಾಗಾಗಿ, ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರ ಬಿದ್ದಿದ್ದಾರೆ. ಪ್ರಿಯಾಂಕ್ ಪಾಂಚಾಲ್ ಅವರು ರೋಹಿತ್ ಶರ್ಮಾ ಬದಲು ತಂಡ ಸೇರಿಕೊಂಡಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ಮೂಲಕ ತಿಳಿಸಿತ್ತು.
ಇದನ್ನೂ ಓದಿ:U-19 ತಂಡಕ್ಕೆ ಉಪಯುಕ್ತ ಸಲಹೆ ನೀಡಿದ ಕಪ್ತಾನ.. ಯುವ ಪ್ಲೇಯರ್ಸ್ಗೆ ರೋಹಿತ್ರಿಂದ ಕ್ರಿಕೆಟ್ ಪಾಠ