ಹೈದರಾಬಾದ್ : ಟಿ-20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ(Team India) ಅಭಿಯಾನ ಮುಕ್ತಾಯಗೊಳ್ಳುತ್ತಿದ್ದಂತೆ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ನಾಯಕತ್ವದಿಂದ ಕೆಳಗಿಳಿದಿದ್ದಾರೆ.
ಹೀಗಾಗಿ, ಈಗಾಗಲೇ ನೂತನ ಕ್ಯಾಪ್ಟನ್ ಆಗಿ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ(Rohit Sharma) ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಸುದ್ದಿ ಹರಿದಾಡಲು ಶುರುವಾಗಿದೆ.
ಸದ್ಯ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ನಾಯಕನಾಗಿರುವ ವಿರಾಟ್ ಕೊಹ್ಲಿ ಮುಂಬರುವ ದಿನಗಳಲ್ಲಿ ODI ನಾಯಕತ್ವಕ್ಕೂ ವಿದಾಯ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ಮಂಡಳಿ(BCCI) ವಿರಾಟ್ ಜೊತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂಬ ವರದಿ ಕೂಡ ಹರಿದಾಡುತ್ತಿದೆ. ಇದೆಲ್ಲದರ ಮಧ್ಯೆ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ(Ravi Shastri) ಮಹತ್ವದ ಸುಳಿವು ಬಿಚ್ಚಿಟ್ಟಿದ್ದಾರೆ.
ವಿಶ್ವಕಪ್ ಅಭಿಯಾನದೊಂದಿಗೆ ರವಿಶಾಸ್ತ್ರಿ ಕೋಚ್(Former India head coach Ravi Shastri) ಅವಧಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಕೆಲವೊಂದು ಮಹತ್ವದ ವಿಚಾರ ಹಂಚಿಕೊಂಡಿದ್ದಾರೆ.
ಬರುವ ದಿನಗಳಲ್ಲಿ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ನಾಯಕತ್ವಕ್ಕೂ ವಿದಾಯ ಘೋಷಣೆ ಮಾಡಬಹುದು ಎಂದಿದ್ದಾರೆ. ಟೆಸ್ಟ್ ಕ್ರಿಕೆಟ್(Test Cricket) ಬಗ್ಗೆ ಹೆಚ್ಚಿನ ಗಮನ ಹರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿಕೊಂಡಿದ್ದಾರೆ.
ಇದನ್ನೂ ಓದಿರಿ: ಟೀಂ ಇಂಡಿಯಾದಲ್ಲಿ ಚಾನ್ಸ್ ಗಿಟ್ಟಿಸಿಕೊಂಡ ವೆಂಕಟೇಶ್ ಅಯ್ಯರ್ ಜೊತೆ Etv ಭಾರತ ಸಂದರ್ಶನ
ಟೆಸ್ಟ್ ಕ್ರಿಕೆಟ್ನಲ್ಲಿ ಟೀಂ ಇಂಡಿಯಾ ಅದ್ಭುತ ಫಾರ್ಮ್ನಲ್ಲಿದೆ. ಕಳೆದ ಐದು ವರ್ಷಗಳಿಂದಲೂ ಅಭೂತಪೂರ್ವ ಸಾಧನೆ ಮಾಡಿದೆ. ಈ ಹಿಂದೆ ಅನೇಕರು ನಾಯಕತ್ವದ ಜವಾಬ್ದಾರಿ ವಹಿಸಿಕೊಂಡು ತದನಂತರ ಬ್ಯಾಟಿಂಗ್ನತ್ತ ಗಮನ ಹರಿಸುವ ಉದ್ದೇಶದಿಂದ ಇಂತಹ ನಿರ್ಧಾರ ಕೈಗೊಂಡಿರುವ ನಿದರ್ಶನಗಳಿವೆ. ವಿರಾಟ್ ಕೂಡ ಆ ರೀತಿಯ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದಿದ್ದಾರೆ.