ಮುಂಬೈ: ಇತ್ತ ಭಾರತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಸರಣಿ ನಡೆದಿರುವ ಬೆನ್ನಲ್ಲೇ ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯಗಳ ಸರಣಿಯ ಕೊನೆಯ ಪಂದ್ಯದಲ್ಲಿ ಆಡಲು ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸೇರಿದಂತೆ ಇನ್ನೂ ಕೆಲ ಆಟಗಾರರು ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ.
5 ಟೆಸ್ಟ್ ಮ್ಯಾಚ್ಗಳ ಸರಣಿಯಲ್ಲಿ ಸದ್ಯ ಭಾರತ 2-1 ರಿಂದ ಮುನ್ನಡೆ ಕಾಯ್ದುಕೊಂಡಿದೆ. ಈಗ ಕೊನೆಯ ಹಾಗೂ 5ನೇ ಟೆಸ್ಟ್ ಮ್ಯಾಚಿನ ದಿನಾಂಕವನ್ನು ಮರು ನಿಗದಿಗೊಳಿಸಲಾಗಿದ್ದು, ಜುಲೈ 1 ರಿಂದ 5 ರವರೆಗೆ ಬರ್ಮಿಂಗ್ ಹ್ಯಾಂನ ಎಜ್ ಬಾಸ್ಟನ್ ನಲ್ಲಿ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ 17 ಆಟಗಾರರ ಪಟ್ಟಿಯನ್ನು ಆಯ್ಕೆ ಸಮಿತಿ ಈಗಾಗಲೇ ಬಿಡುಗಡೆ ಮಾಡಿದೆ.
- — BCCI (@BCCI) June 16, 2022 " class="align-text-top noRightClick twitterSection" data="
— BCCI (@BCCI) June 16, 2022
">— BCCI (@BCCI) June 16, 2022
ಭಾರತದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡುತ್ತಿರುವ ತಂಡದ ಸದಸ್ಯರಲ್ಲದ ಆಟಗಾರರು ಇಂಗ್ಲೆಂಡ್ಗೆ ಪ್ರವಾಸ ಬೆಳೆಸಿದ ಚಿತ್ರಗಳನ್ನು ಬಿಸಿಸಿಐ ಟ್ವೀಟ್ ಮಾಡಿದೆ. 17 ಆಟಗಾರರ ಪೈಕಿ ವಿರಾಟ್ ಕೊಹ್ಲಿ, ಓಪನರ್ ಶುಬ್ಮನ್ ಗಿಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ ಪೂಜಾರಾ ಗುರುವಾರದಂದು ಇಂಗ್ಲೆಂಡ್ಗೆ ಪ್ರಯಾಣ ಆರಂಭಿಸಿದ್ದಾರೆ.
ಓದಿ: ಕೊಹ್ಲಿ ಮೀರಿಸಿದ ಪಾಕ್ ಕ್ರಿಕೆಟಿಗ, ಟಿ20ಯಲ್ಲಿ ಇಶಾನ್ ಕಿಶನ್‌ಗೆ ಬಡ್ತಿ
ಕ್ಯಾಪ್ಟನ್ ರೋಹಿತ್ ಶರ್ಮಾ ಹಾಗೂ ವೈಸ್ ಕ್ಯಾಪ್ಟನ್ ಕೆ.ಎಲ್. ರಾಹುಲ್ ಗಾಯದಿಂದ ಬಳಲುತ್ತಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರೂ ಸದ್ಯದಲ್ಲೇ ಆಡಲು ಫಿಟ್, ಆದರೆ ಸದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಆಡುತ್ತಿರುವ ತಂಡದ ಇತರ ಸದಸ್ಯರೊಂದಿಗೆ ಇಂಗ್ಲೆಂಡ್ಗೆ ಶೀಘ್ರದಲ್ಲೇ ತೆರಳಲಿದ್ದಾರೆ.
ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್ : ರೋಹಿತ್ ಶರ್ಮಾ (ಕ್ಯಾಪ್ಟನ್), ಕೆಎಲ್ ರಾಹುಲ್ (ವೈಸ್ ಕ್ಯಾಪ್ಟನ್), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ (ವಿಕೆಟ್ ಕೀಪರ್), ಕೆಎಸ್ ಭರತ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಉಮೇಶ ಯಾದವ, ಪ್ರಸಿಧ ಸಿನ್ಹಾ.