ಹೈದರಾಬಾದ್: ದುಬೈನಲ್ಲಿ ಆಯೋಜನೆಗೊಂಡಿರುವ ಐಸಿಸಿ ಟಿ-20 ವಿಶ್ವಕಪ್ ಮುಕ್ತಾಯಗೊಳ್ಳುತ್ತಿದ್ದಂತೆ ಚುಟುಕು ಕ್ರಿಕೆಟ್ ನಾಯಕತ್ವದಿಂದ ತಾವು ಕೆಳಗಿಳಿಯುವುದಾಗಿ ವಿರಾಟ್ ಕೊಹ್ಲಿ ಈಗಾಗಲೇ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿ ಮುಂದೆ ಮತ್ತೊಂದು ಮಹತ್ವದ ವಿಚಾರ ಚರ್ಚಿಸಿದ್ದರು ಎಂಬ ವಿಷಯ ಇದೀಗ ಬಹಿರಂಗಗೊಂಡಿದೆ.
ಏಕದಿನ ಕ್ರಿಕೆಟ್ನಲ್ಲಿ ಉಪನಾಯಕನಾಗಿರುವ 34 ವರ್ಷದ ರೋಹಿತ್ ಶರ್ಮಾ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಿ, ಕನ್ನಡಿಗ ಕೆ.ಎಲ್.ರಾಹುಲ್ಗೆ ನೀಡುವಂತೆ ಕೇಳಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇದರ ಜೊತೆಗೆ ಟಿ-20 ಕ್ರಿಕೆಟ್ನಲ್ಲಿ ಉಪನಾಯಕನ ಸ್ಥಾನವನ್ನು ರಿಷಭ್ ಪಂತ್ಗೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರೋಹಿತ್ ಶರ್ಮಾ ಅವರಿಗೆ ಈಗಾಗಲೇ 34 ವರ್ಷ ವಯಸ್ಸಾಗಿರುವ ಕಾರಣ ಅವರನ್ನು ಏಕದಿನ ಕ್ರಿಕೆಟ್ನಲ್ಲಿ ಉಪನಾಯಕ ಸ್ಥಾನದಿಂದ ತೆಗೆದುಹಾಕುವಂತೆ ಪ್ರಸ್ತಾಪ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ: ಭದ್ರತಾ ಕಾರಣಕ್ಕೆ ನ್ಯೂಜಿಲ್ಯಾಂಡ್-ಪಾಕ್ ಕ್ರಿಕೆಟ್ ಸರಣಿ ರದ್ದು
ಟಿ-20 ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾಗೆ ನಾಯಕತ್ವ ಜವಾಬ್ದಾರಿ ನೀಡಿದರೆ, ರಿಷಭ್ ಪಂತ್, ಕೆ.ಎಲ್.ರಾಹುಲ್ ಹಾಗೂ ಜಸ್ಪ್ರೀತ್ ಬುಮ್ರಾ ಉಪನಾಯಕ ಸ್ಥಾನಕ್ಕೆ ಸ್ಪರ್ಧಿಗಳಾಗಿದ್ದು, ಅವರಿಗೆ ಮಣೆ ಹಾಕುವಂತೆ ತಿಳಿಸಿದ್ದರು ಎನ್ನಲಾಗಿದೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ? ಎಂಬುದು ಇಲ್ಲಿಯವರೆಗೆ ಗೊತ್ತಾಗಿಲ್ಲ. ಆದರೆ ಕ್ರಿಕೆಟ್ ವಲಯದಲ್ಲಿ ಹೆಚ್ಚಿನ ಚರ್ಚೆಗೆ ಗ್ರಾಸವಾಗಿದೆ.
ಟಿ-20 ಹಾಗೂ ಏಕದಿನ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದುಕೊಂಡ ಸಂದರ್ಭದಲ್ಲಿ ನಾಯಕತ್ವ ಜವಾಬ್ದಾರಿ ವಹಿಸಿಕೊಂಡಿರುವ ರೋಹಿತ್ ಶರ್ಮಾ ಉತ್ತಮ ಪ್ರದರ್ಶನ ನೋಡಿದ್ದು, ಅನೇಕ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲ್ಲಿಸಿದ್ದಾರೆ. ಇದರ ಜೊತೆಗೆ ಐಪಿಎಲ್ನಲ್ಲಿ ಮುಂಬೈ ತಂಡದ ಕ್ಯಾಪ್ಟನ್ ಆಗಿ ಮಹತ್ವದ ಸಾಧನೆ ಮಾಡಿದ್ದಾರೆ.