ಮೊಹಾಲಿ(ಪಂಜಾಬ್): ಭಾರತ ಮತ್ತು ಶ್ರೀಲಂಕಾದ ನಡುವಿನ ಮೊದಲ ಟೆಸ್ಟ್ ಪಂದ್ಯ ಪಂಜಾಬ್ನ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಆರಂಭವಾಗಿದೆ. ಟಾಸ್ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಟಿ-20 ಸರಣಿಯಲ್ಲಿ ಶ್ರೀಲಂಕಾವನ್ನು ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ, ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಎದುರಿಸುತ್ತಿದ್ದು, ಈಗ ನಡೆಯುತ್ತಿರುವುದು ಮೊದಲ ಟೆಸ್ಟ್ ಪಂದ್ಯವಾಗಿದೆ. ಟಿ-20 ಸರಣಿಯಲ್ಲಿ ಗೆದ್ದಿರುವ ಟೀಂ ಇಂಡಿಯಾ ಟೆಸ್ಟ್ ಸರಣಿಯಲ್ಲೂ ಗೆಲ್ಲುವ ತವಕದಲ್ಲಿದೆ.
ಟಾಸ್ ಗೆದ್ದು ಮಾತನಾಡಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ನಾವು ಮೊದಲು ಬ್ಯಾಟಿಂಗ್ ಮಾಡಲಿದ್ದೇವೆ. ಟೀಂ ಇಂಡಿಯಾದ ನಾಯಕತ್ವವನ್ನು ನಾನು ವಹಿಸಿಕೊಂಡಿರುವುದು ದೊಡ್ಡ ಗೌರವವಾಗಿದೆ. ಇದು ವಿಶೇಷ ಸಂದರ್ಭ ಎಂದು ನಮಗೆ ತಿಳಿದಿದೆ. 100 ಟೆಸ್ಟ್ ಪಂದ್ಯಗಳನ್ನು ಆಡುವುದು ಅತ್ಯಂತ ಮಹತ್ವದ ಸಾಧನೆ. ಅಂತಹ ಸಾಧನೆಯನ್ನು ವಿರಾಟ್ ಕೊಹ್ಲಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಫ್ರಾನ್ಸ್ನಲ್ಲಿ ವ್ಯಾಕ್ಸಿನ್ ರೂಲ್ಸ್ ಸಡಿಲಿಕೆ: ಫ್ರೆಂಚ್ ಓಪನ್ನಲ್ಲಿ ಆಡಲಿದ್ದಾರಾ ಜೊಕೊವಿಕ್?
ಟೀಂ ಇಂಡಿಯಾದ ಆಟಗಾರರು: ರೋಹಿತ್ ಶರ್ಮಾ (ಸಿ),ವಿರಾಟ್ ಕೊಹ್ಲಿ, ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಜಯಂತ್ ಯಾದವ್
ಶ್ರೀಲಂಕಾದ ಆಟಗಾರರು: ದಿಮುತ್ ಕರುಣಾರತ್ನೆ (ಸಿ), ಲಹಿರು ತಿರಿಮನ್ನೆ, ಪಾತುಮ್ ನಿಸ್ಸಾಂಕ, ಏಂಜೆಲೊ ಮ್ಯಾಥ್ಯೂಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ನಿರೋಶನ್ ಡಿಕ್ವೆಲ್ಲಾ , ಲಹಿರು ಕುಮಾರ, ಸುರಂಗ ಲಕ್ಮಲ್, ಲಸಿತ್ ಎಂಬುಲ್ಡೆನಿಯಾ, ವಿಶ್ವ ಫೆರ್ನಾಂಡೋ