ETV Bharat / sports

ಮೂರನೇ ಏಕದಿನಕ್ಕೆ ಕುಲ್​ದೀಪ್​ಗೆ ಬುಲಾವ್​: ಮುಂಬೈಗೆ ಮರಳಿರುವ ರೋಹಿತ್ - ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯ

ಕುಲದೀಪ್ ಸೇನ್ ಮತ್ತು ದೀಪಕ್ ಚಹಾರ್ ಇಗಾಗಲೇ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ನಡುವೆ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್​ ಶರ್ಮಾ ಅವರೂ ಗಾಯಕ್ಕೆ ತುತ್ತಾಗಿದ್ದಾರೆ.

kuldeep-yadav-in-indian-squad-for-third-odi-with-bangladesh
ಮುಂಬೈಗೆ ಮರಳಿರುವ ರೋಹಿತ್
author img

By

Published : Dec 9, 2022, 1:58 PM IST

ನವದೆಹಲಿ: ಎರಡನೇ ಏಕದಿನ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವಾಗ ಹೆಬ್ಬೆರಳಿಗೆ ಗಾಯ ಮಾಡಿಕೊಂಡ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮುಂಬೈಗೆ ವಾಪಸ್​ ಆಗಿದ್ದಾರೆ. ಇದಕ್ಕೂ ಮುನ್ನ ಕುಲದೀಪ್ ಸೇನ್ ಮತ್ತು ದೀಪಕ್ ಚಹಾರ್ ಕೂಡ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದರು. ಅವರ ಸ್ಥಾನಕ್ಕೆ ಆಯ್ಕೆ ಸಮಿತಿ ಕುಲದೀಪ್ ಯಾದವ್ ಅವರನ್ನು ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕೆ ಭಾರತ ತಂಡಕ್ಕೆ ಸೇರಿಕೊಂಡಿದ್ದಾರೆ.

ನಾಯಕ ರೋಹಿತ್ ಶರ್ಮಾ ಗಾಯಗೊಂಡ ನಂತರ, ಅವರ ಗಾಯವನ್ನು ಬಿಸಿಸಿಐ ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಢಾಕಾದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಸದ್ಯ ಅವರು ತಜ್ಞರ ಸಮಾಲೋಚನೆಗಾಗಿ ಮುಂಬೈಗೆ ತೆರಳಿದ್ದಾರೆ. ಕೊನೆಯ ಏಕದಿನಕ್ಕೆ ಅಲಭ್ಯರಾಗಿರುವ ರೋಹಿತ್​ ಶರ್ಮಾ ಟೆಸ್ಟ್​ಗೆ ಮತ್ತೆ ತಂಡ ಸೇರುವ ಬಗ್ಗೆ ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ.

ವೇಗದ ಬೌಲರ್ ಕುಲದೀಪ್ ಸೇನ್ ಮೊದಲ ಏಕದಿನ ಪಂದ್ಯದ ನಂತರ ತಮ್ಮ ಬೆನ್ನು ನೋವಿನ ಕಾರಣ ಹೊರಗುಳಿದ್ದಿದ್ದರು. ದೀಪಕ್ ಚಹಾರ್ ಸಹ ಮಂಡಿ ನೋವಿನ ಸಮಸ್ಯಯಿಂದ ತಂಡದಿಂದ ಹೊರಗುಳಿದಿದ್ದಾರೆ. ಆಯ್ಕೆ ಸಮಿತಿಯು ಸ್ಪಿನ್ ಬೌಲರ್ ಕುಲದೀಪ್ ಯಾದವ್ ಅವರನ್ನು ಮೂರನೇ ಮತ್ತು ಅಂತಿಮ ಏಕದಿನ ಪಂದ್ಯಕ್ಕೆ ಭಾರತ ತಂಡಕ್ಕೆ ಸೇರಿಸಿದೆ.

ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕೆ ಭಾರತ ತಂಡ ಹೀಗಿರಲಿದೆ. ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್. ಸಿರಾಜ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್.

ಇದನ್ನೂ ಓದಿ: ರೋಹಿತ್ ಶರ್ಮಾ 500 ಸಿಕ್ಸರ್.. ಕ್ರಿಸ್​ಗೇಲ್​ ದಾಖಲೆ ಮುರಿಯಲು ಬೇಕು 51 ಸಿಕ್ಸರ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.