ETV Bharat / sports

ನೀವೆಲ್ಲರೂ ಕೊಹ್ಲಿ ಫಾರ್ಮ್​ ಬಗ್ಗೆ ಮಾತನಾಡುವುದನ್ನ ಮೊದಲು ನಿಲ್ಲಿಸಿ.. ಆಗ ಎಲ್ಲವೂ ಸರಿಯಾಗುತ್ತದೆ : ರೋಹಿತ್ ಗರಂ - ರೋಹಿತ್ ಶರ್ಮಾ ವಿರಾಟ್​ ಕೊಹ್ಲಿ

ವೆಸ್ಟ್​ ಇಂಡೀಸ್ ವಿರುದ್ಧದ ಟಿ20 ಸರಣಿಗೂ ಮುನ್ನ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡು ವೇಳೆ, ಮತ್ತೆ ವರದಿಗಾರರು ಕೊಹ್ಲಿ ಬ್ಯಾಟಿಂಗ್ ಫಾರ್ಮ್​ ಬಗ್ಗೆ ಪ್ರಶ್ನೆ ಕೇಳಿದ್ದರಿಂದ ರೋಹಿತ್ ಅಸಮಾಧಾನ ವ್ಯಕ್ತಪಡಿಸಿದರು..

Rohit dismisses concerns around star batter's poor form
ವಿರಾಟ್ ಕೊಹ್ಲಿ ಫಾರ್ಮ್​ - ರೋಹಿತ್ ಶರ್ಮಾ
author img

By

Published : Feb 15, 2022, 3:10 PM IST

ಕೋಲ್ಕತ್ತಾ : ವಿರಾಟ್​ ಕೊಹ್ಲಿ ಫಾರ್ಮ್​ ಸಮಸ್ಯೆ ಬಗ್ಗೆ ಮಾತನಾಡಲು ನಿರಾಕರಿಸುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಅವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದರೆ ಎಲ್ಲವೂ ಸರಿದಾರಿಗೆ ಬರಲಿದೆ ಎಂದು ಹೇಳಿದ್ದಾರೆ.

ವೆಸ್ಟ್​ ಇಂಡೀಸ್ ವಿರುದ್ಧದ ಟಿ20 ಸರಣಿಗೂ ಮುನ್ನ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ, ಮತ್ತೆ ವರದಿಗಾರರು ಕೊಹ್ಲಿ ಬ್ಯಾಟಿಂಗ್ ಫಾರ್ಮ್​ ಬಗ್ಗೆ ಪ್ರಶ್ನೆ ಕೇಳಿದ್ದರಿಂದ, ರೋಹಿತ್ ಅಸಮಾಧಾನ ವ್ಯಕ್ತಪಡಿಸಿದರು.

ಇದೆಲ್ಲಾ ನಿಮ್ಮಿಂದ ಶುರುವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಒಂದು ವೇಳೆ ನೀವೆಲ್ಲಾ(ಮಾಧ್ಯಮ) ಕೆಲವು ಸಮಯ ಸುಮ್ಮನಿದ್ದರೆ ಎಲ್ಲವೂ ಸರಿಯಾಗುತ್ತದೆ. ನಿಮ್ಮ ಕಡೆಯಿಂದ ಈ ಚರ್ಚೆ ನಿಂತರೆ ಎಲ್ಲವನ್ನು ಸರಿಪಡಿಸಿಕೊಳ್ಳಬಹುದು ಎಂದು ತಮ್ಮ ಮಾಜಿ ನಾಯಕನ ಬೆನ್ನಿಗೆ ನಿಂತರು.

ಕೊಹ್ಲಿ ಒತ್ತಡದಲ್ಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ರೋಹಿತ್​, ಅವರು ಉತ್ತಮ ಸ್ಥಿತಿಯಲ್ಲಿದ್ದಾರೆ. ಅವರು ಒಂದು ದಶಕಕ್ಕಿಂತಲೂ ಹೆಚ್ಚು ವರ್ಷಗಳ ಕಾಲ ಅಂತಾರಾಷ್ಟ್ರೀಯ ತಂಡದ ಭಾಗವಾಗಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅವರು ಆಡಿದ ಅನುಭವ ಇರುವುದರಿಂದ ಅವರಿಗೆ ಹೇಗೆ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಬೇಕೆಂದು ಚೆನ್ನಾಗಿ ತಿಳಿದಿದೆ. ಯಾರೂ ಕೊಹ್ಲಿ ಫಾರ್ಮ್​ ಬಗ್ಗೆ ಪ್ರಶ್ನೆ ಕೇಳಬೇಡಿ ಎಂದರು.

ವಿರಾಟ್​ ಕೊಹ್ಲಿ 2019ರಿಂದ ಈವರೆಗೂ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಶತಕ ಬಾರಿಸಿಲ್ಲ ಎಂಬುದ ಬಗ್ಗೆ ರೋಹಿತ್ ಪ್ರತಿಕ್ರಿಯಿಸಿ, ಶತಕ ಸಿಡಿಸದಿರುವುದು ಫಾರ್ಮ್​ ಕಳೆದುಕೊಂಡಂತಲ್ಲ. ಅವರು ನಿರಂತರವಾಗಿ ಅರ್ಧಶತಕ ಸಿಡಿಸುತ್ತಿದ್ದಾರೆ.

ಹಾಗಾಗಿ, ಅವರಿಗೆ ಆತ್ಮವಿಶ್ವಾಸದ ಕೊರತೆ ಉಂಟಾಗಿಲ್ಲ. ಸದ್ಯಕ್ಕೆ ಮಾಧ್ಯಮದವರು ಅವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದರೆ, ಎಲ್ಲವೂ ಸರಿಯಾಗುತ್ತದೆ ಎಂದು ಮತ್ತೊಮ್ಮೆ ಪುನರುಚ್ಛರಿಸಿದರು. ವೆಸ್ಟ್​ ಇಂಡೀಸ್ ವಿರುದ್ಧದ ಟಿ20 ಸರಣಿಯ ಪಂದ್ಯಗಳು ಫೆಬ್ರವರಿ 16, 18 ಮತ್ತು 20ರಂದು ನಡೆಯಲಿವೆ.

ಇದನ್ನೂ ಓದಿ: ವಿಂಡೀಸ್‌​ ಟಿ-20 ಸರಣಿಯಿಂದ ಕೆ.ಎಲ್.ರಾಹುಲ್ ಔಟ್: ಉಪನಾಯಕನಾಗಿ ರಿಷಬ್​ ಪಂತ್​ಗೆ ಬಡ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.