ಮಸ್ಕತ್, ಓಮನ್ : ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದಿರುವ ಬಗ್ಗೆ ಈಗಾಗಲೇ ಅನೇಕರು ಮಾತನಾಡಿದ್ದಾರೆ ಮತ್ತು ಈ ಬಗ್ಗೆ ಗಾಸಿಪ್ ಮಾಡುವುದು ನನಗೆ ಬೇಕಿಲ್ಲ. ನನಗೆ ಸಮಯವೂ ಇಲ್ಲ ಎಂದು ಟೀಂ ಇಂಡಿಯಾದ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.
ಓಮನ್‌ನ ಮಸ್ಕತ್‌ನಲ್ಲಿರುವ ಎಎನ್ಐ ನಡೆಸಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ರವಿಶಾಸ್ತ್ರಿ, ಬೇರೊಬ್ಬರ ಖಾಸಗಿ ವಿಚಾರಗಳ ಬಗ್ಗೆ ನಾನು ಸಾರ್ವಜನಿಕವಾಗಿ ಕಾಮೆಂಟ್ ಮಾಡುವುದಿಲ್ಲ ಎಂದಿದ್ದಾರೆ.
ದಕ್ಷಿಣ ಆಫ್ರಿಕಾದ ವಿರುದ್ಧದ ಸರಣಿಯಲ್ಲಿ ಟೀಂ ಇಂಡಿಯಾ ಸೋಲಿನ ಕುರಿತು ಮಾತನಾಡಿದ ರವಿಶಾಸ್ತ್ರಿ 'ನಿಜ ಹೇಳಬೇಕೆಂದರೆ, ನಾನು ಆ ಸರಣಿಯನ್ನು ನೋಡಿಲ್ಲ. ಆ ಸರಣಿಯ ಒಂದೇ ಒಂದು ಎಸೆತವನ್ನೂ ನಾನು ನೋಡಿಲ್ಲ' ಎಂದಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಪ್ರಸ್ತುತ ಟೀಂ ಇಂಡಿಯಾ ತಂಡದ ಬಗ್ಗೆ ಮಾತನಾಡಿದ ರವಿಶಾಸ್ತ್ರಿ, ಐದು ವರ್ಷಗಳ ಕಾಲ ನಾವು ನಂಬರ್ ಒನ್ ಟೆಸ್ಟ್ ತಂಡವಾಗಿದ್ದೆವು. ಎಲ್ಲಾ ಪಂದ್ಯಗಳನ್ನು ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ.
ಭಾರತ ಟೆಸ್ಟ್ ನಾಯಕನಾಗಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಆಡಿದ ದಾಖಲೆಯನ್ನು ಕೊಹ್ಲಿ ಹೊಂದಿದ್ದಾರೆ. ನಾಯಕನ ಸ್ಥಾನದಲ್ಲಿದ್ದುಕೊಂಡು ಗ್ರೇಮ್ ಸ್ಮಿತ್, ರಿಕಿ ಪಾಂಟಿಂಗ್ ಮತ್ತು ಸ್ಟೀವ್ ವಾ ಮಾತ್ರ ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿಗಿಂತ ಹೆಚ್ಚು ಪಂದ್ಯಗಳನ್ನು ಗೆದ್ದಿದ್ದಾರೆ ಎಂದು ರವಿಶಾಸ್ತ್ರಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ತುರ್ತು ಬದಲಾವಣೆ ಅಗತ್ಯವಿದೆ ಎಂದ ರಾಹುಲ್!