ಚಂಡೀಗಢ: ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದಾಗಿ ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಸಾವನ್ನಪ್ಪಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಕೋವಿಡ್ ಸೋಂಕು ದೃಢಗೊಂಡಿದ್ದ ಕಾರಣ ಕಳೆದ ಕೆಲ ದಿನಗಳಿಂದ ಚಂಡೀಗಢದ ಪಿಜಿಐಎಂಆರ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.
ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ಗಳಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದ ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಅನೇಕ ರಾಜಕಾರಣಿಗಳು, ಕ್ರೀಡಾಪಟುಗಳು ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ನಟ ಶಾರುಖ್ ಖಾನ್, ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್ ಸೇರಿದಂತೆ ಸಾಕಷ್ಟು ಮಂದಿ ಕಂಬನಿ ಮಿಡಿದಿದ್ದಾರೆ. ವಿಶೇಷವಾಗಿ ಟೀಂ ಇಂಡಿಯಾ ಪ್ಲೇಯರ್ಸ್ ಕೂಡ ಕಪ್ಪು ಪಟ್ಟಿ ಧರಿಸಿ ಅಗಲಿರುವ ದಿಗ್ಗಜನಿಗೆ ಗೌರವ ಸಲ್ಲಿಸಿದ್ದಾರೆ.
ಇದನ್ನೂ ಓದಿರಿ: ಮಿಲ್ಖಾ ಸಿಂಗ್ಗೆ ಗೌರವ: ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದ ಟೀಂ ಇಂಡಿಯಾ
ಸರ್ಕಾರಿ ಗೌರವದೊಂದಿಗೆ ನಡೆದ ಅಂತ್ಯಕ್ರಿಯೆ
ಪಂಜಾಬ್ ಸರ್ಕಾರವು ಸಕಲ ಸರ್ಕಾರಿ ಗೌರವಗಳೊಂದಿಗೆ ಮಿಲ್ಖಾ ಸಿಂಗ್ ಅಂತ್ಯಕ್ರಿಯೆ ನಡೆಸಿದ್ದು, ಆ ರಾಜ್ಯದಲ್ಲಿ ಒಂದು ದಿನ ಶೋಕಾಚರಣೆ ಮಾಡಲು ನಿರ್ಧರಿಸಿದೆ.