ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಗೊಳ್ಳಲು ಕೇವಲ ಎರಡು ದಿನ ಬಾಕಿ ಇದ್ದು, ಈ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಮಹೇಂದ್ರ ಸಿಂಗ್ ಧೋನಿ ಕೆಳಗಿಳಿದಿದ್ದಾರೆ. ಈ ಸ್ಥಾನಕ್ಕೆ ಆಲ್ರೌಂಡರ್ ರವೀಂದ್ರ ಜಡೇಜಾ ಆಯ್ಕೆಯಾಗಿದ್ದಾರೆ. ಈ ಮಾಹಿತಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಟ್ವೀಟ್ ಮಾಡುವ ಮೂಲಕ ಬಹಿರಂಗಪಡಿಸಿದೆ.
-
📑 Official Statement 📑#WhistlePodu #Yellove 💛🦁 @msdhoni @imjadeja
— Chennai Super Kings (@ChennaiIPL) March 24, 2022 " class="align-text-top noRightClick twitterSection" data="
">📑 Official Statement 📑#WhistlePodu #Yellove 💛🦁 @msdhoni @imjadeja
— Chennai Super Kings (@ChennaiIPL) March 24, 2022📑 Official Statement 📑#WhistlePodu #Yellove 💛🦁 @msdhoni @imjadeja
— Chennai Super Kings (@ChennaiIPL) March 24, 2022
2022ಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ರಿಟೈನ್ ಆಟಗಾರನಾಗಿ ಜಡೇಜಾರನ್ನು ಆಯ್ಕೆ ಮಾಡಿತ್ತು. ಅವರಿಗೆ 16 ಕೋಟಿ ರೂ. ನೀಡಲಾಗಿತ್ತು. ನಂತರದ ಸ್ಥಾನದಲ್ಲಿ ಧೋನಿಗೆ 12 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿತ್ತು. ಈ ಮೂಲಕ ಜಡೇಜಾ ಚೆನ್ನೈ ತಂಡದ ಭವಿಷ್ಯದ ನಾಯಕ ಎಂಬ ಸೂಚನೆ ಕೊಟ್ಟಿತ್ತು.
ಮಾರ್ಚ್ 26ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಗೊಳ್ಳಲಿದ್ದು, ಮೊದಲ ಪಂದ್ಯದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಬಾರಿಯ ರನ್ನರ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೆಣಸಾಟ ನಡೆಸಲಿದೆ. ಇದಕ್ಕೂ ಮುನ್ನು ಮಹೇಂದ್ರ ಸಿಂಗ್ ಧೋನಿ ನಾಯಕತ್ವದಿಂದ ಕೆಳಗಿಳಿದಿದ್ದು, ಆ ಜವಾಬ್ದಾರಿ ಆಲ್ರೌಂಡರ್ ರವೀಂದ್ರ ಜಡೇಜಾಗೆ ವಹಿಸಲಾಗಿದೆ.
2008ರಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಬ್ಯಾಟ್ ಬೀಸುತ್ತಿರುವ ಧೋನಿ, 12 ಆವೃತ್ತಿಗಳಲ್ಲಿ ತಂಡ ಮುನ್ನಡೆಸಿದ್ದಾರೆ. ಒಟ್ಟು 4 ಸಲ ಸಿಎಸ್ಕೆ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಧೋನಿ ಪಾತ್ರ ಹಿರಿದು. ಐಪಿಎಲ್ನಲ್ಲಿ ಅತ್ಯಂತ ವಿಶ್ವಾಸಾರ್ಹ ತಂಡಗಳ ಪೈಕಿ ಧೋನಿ ನೇತೃತ್ವದ ಸಿಎಸ್ಕೆ ಕೂಡ ಒಂದು ಅನ್ನೋದಿಲ್ಲಿ ಗಮನಾರ್ಹ.
ಇನ್ನು ಮುಂದೆ, ಧೋನಿ ತಂಡದಲ್ಲಿ ಆಟಗಾರನಾಗಿ ಮುಂದುವರೆಯಲಿದ್ದಾರೆ. ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಗೂ ಮುಂಚಿತವಾಗಿ ಸಿಎಸ್ಕೆ, ಮಹೇಂದ್ರ ಸಿಂಗ್ ಧೋನಿ, ರವೀಂದ್ರ ಜಡೇಜಾ, ಮೊಯಿನ್ ಅಲಿ ಹಾಗೂ ಋತುರಾಜ್ ಗಾಯಕ್ವಾಡ್ ಅವರನ್ನು ರಿಟೈನ್ ಮಾಡಿಕೊಂಡಿತ್ತು.