ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅವರಿಗೆ ಶೋಕಾಸ್ ನೋಟಿಸ್ ಕಳಿಸಲು ಸಿದ್ಧತೆ ನಡೆಸಲಾಗಿತ್ತು ಎಂಬ ವರದಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ 'ಆ ವರದಿ ನಿಜವಲ್ಲ' ಎಂದು ಸ್ಪಷ್ಟನೆ ನೀಡಿದ್ದಾರೆ.
ಶುಕ್ರವಾರವಷ್ಟೇ ಬಂದ ವರದಿಗಳ ಪ್ರಕಾರ ವಿರಾಟ್ ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡುವ ಕುರಿತಂತೆ ಸುದ್ದಿಗೋಷ್ಠಿಯೊಂದರಲ್ಲಿ 'ಟಿ-20 ಪಂದ್ಯಗಳ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರದ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಅಥವಾ ಆಯ್ಕೆ ಸಮಿತಿಯ ಯಾರೂ ನನಗೆ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ಸಲಹೆ ನೀಡಿರಲಿಲ್ಲ' ಎಂದು ಹೇಳಿಕೊಂಡಿದ್ದರು.
ವಿರಾಟ್ ಕೊಹ್ಲಿ ಅವರ ಹೇಳಿಕೆ ಗಂಗೂಲಿ ಅವರ ಹೇಳಿಕೆಗೆ ವಿರುದ್ಧವಾಗಿತ್ತು. ವಿರಾಟ್ ಕೊಹ್ಲಿ ರಾಜೀನಾಮೆ ನೀಡುವ ಮುನ್ನ ಅವರು ಆತುರದಿಂದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ನಾನು ಹೇಳಿದ್ದೆನು ಎಂದಿದ್ದರು. ಆದರೆ, ಬಿಸಿಸಿಐನಿಂದ ಅಥವಾ ಆಯ್ಕೆ ಸಮಿತಿಯಿಂದ ಯಾರೂ ನನಗೆ ಸಲಹೆ ನೀಡಿರಲಿಲ್ಲ ಎಂದು ಕೊಹ್ಲಿ ಹೇಳಿದ್ದು, ಸ್ವಲ್ಪ ಅಸಮಾಧಾನ ಮೂಡಿಸಿತ್ತು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಇದರಿಂದಾಗಿ ಅಸಮಾಧಾನಗೊಂಡಿದ್ದ ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ವಿರುದ್ಧ ಶೋಕಾಸ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಸಿದ್ದರು. ಆದರೆ, ಕ್ರಿಕೆಟ್ ಮಂಡಳಿಯ ಸದಸ್ಯರ ಮನವೊಲಿಕೆಯಿಂದಾಗಿ ಶೋಕಾಸ್ ನೋಟಿಸ್ ಹೊರಡಿಸುವ ನಿರ್ಧಾರದಿಂದ ಹಿಂದೆ ಸರಿದಿದ್ದರು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸೌರವ್ ಗಂಗೂಲಿ ಈ ವರದಿಗಳು ನಿಜವಲ್ಲ ಎಂದು ಎಎನ್ಐಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: IHAI 9ನೇ ರಾಷ್ಟ್ರೀಯ ಮಹಿಳಾ ಐಸ್ ಹಾಕಿ: ಲಡಾಖ್ ತಂಡಕ್ಕೆ ಚಾಂಪಿಯನ್‌ಶಿಪ್