ಕರಾಚಿ: ಪಾಕಿಸ್ತಾನದ ಎಡಗೈ ವೇಗದ ಬೌಲರ್ ಶಾಹೀನ್ ಶಾ ಅಫ್ರಿದಿ ಗಾಯದಿಂದ ಚೇತರಿಸಿಕೊಂಡಿದ್ದಾರೆ. 17 ಮತ್ತು 19 ರಂದು ನಡೆಯಲಿರುವ ಅಭ್ಯಾಸ ಪಂದ್ಯದಲ್ಲಿ ಅವರ ಫಿಟ್ನೆಸ್ ಸಾಬೀತು ಪಡಿಸಲಿದ್ದಾರೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ.
ಜುಲೈನಲ್ಲಿ ಮೊಣಕಾಲಿಗೆ ಗಾಯ ಮಾಡಿಕೊಂಡ ಅಫ್ರಿದಿ ಇಂಗ್ಲೆಂಡ್ನಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಗಾಗಿದ್ದರು. ಅಫ್ರಿದಿ ಶನಿವಾರ ಆಸ್ಟ್ರೇಲಿಯಾಕ್ಕೆ ಬಂದಿಳಿಯಲಿದ್ದಾರೆ. 17 ಮತ್ತು 19 ರಂದು ಕ್ರಮವಾಗಿ ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ವಿರುದ್ಧ ಅಭ್ಯಾಸ ಪಂದ್ಯಗಳಲ್ಲಿ ಅವರ ಫಿಟ್ನೆಸ್ ಪರೀಕ್ಷಿಸಲಾಗುತ್ತದೆ.
ಗಾಲೆಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಮೊಣಕಾಲು ಗಾಯಕ್ಕೆ ಒಳಗಾಗಿದ್ದರು. ಆದರೆ, ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿಶ್ವಕಪ್ನ ಟೀಮ್ನಲ್ಲಿ ಇವರ ಹೆಸರನ್ನು ಸೇರಿಸಿತ್ತು. ಚೇತರಿಸಿ ಕೋಮಡಿರುವ ಆಫ್ರಿದಿ ಆರರಿಂದ ಎಂಟು ಓವರ್ಗಳನ್ನು ಅಭ್ಯಾಸ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : IND vs RSA 3ನೇ ODI: ಭಾರತಕ್ಕೆ ಏಳು ವಿಕೆಟ್ಗಳ ಜಯ.. ಸರಣಿ ವಶ