ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ಆಲ್‌ರೌಂಡರ್ ಆಟಗಾರ ರವೀಂದ್ರ ಜಡೇಜಾ ಹಾಗು ಪತ್ನಿ ರಿವಾಬಾ ಜಡೇಜಾ ತಮ್ಮ ಮಗಳ 5ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದರು.
ಜಡೇಜಾ ಮಗಳು ನಿಧ್ಯಾನಾಗೆ ಈಗ ಐದು ವರ್ಷ ತುಂಬಿದೆ. ಈ ಪ್ರಯುಕ್ತ ಆರ್ಥಿಕವಾಗಿ ಹಿಂದುಳಿದ 5 ಕುಟುಂಬದ ಬಡ ಹೆಣ್ಣುಮಕ್ಕಳ ಹೆಸರಿನಲ್ಲಿ ಜಾಮ್‌ನಗರ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದಾರೆ. ಈ ಖಾತೆಗಳಲ್ಲಿ ತಲಾ 10,000 ಹಣವನ್ನು ಜಮೆ ಮಾಡಿದ್ದಾರೆ.
ರಿವಾಬಾ ಹಾಗು ಜಡೇಜಾ ಸದ್ಯ ಇಂಗ್ಲೆಂಡ್‌ನಲ್ಲಿದ್ದು, ಅಲ್ಲಿಂದಲೇ ವೀಡಿಯೊ-ಕಾನ್ಫರೆನ್ಸ್ ಮೂಲಕ ಫಲಾನುಭವಿಗಳಿಗೆ ಪಾಸ್‌ಬುಕ್ ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.