ಬೆಂಗಳೂರು : ಫಿಟ್ನೆಸ್ ಟೆಸ್ಟ್ ಪಾಸ್ ಮಾಡಿರುವ ರೋಹಿತ್ ಶರ್ಮಾ ಮುಂಬರುವ ವೆಸ್ಟ್ ಇಂಡಿಸ್ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾರತ ತಂಡದ ಆಯ್ಕೆಗೆ ಸೇರ್ಪಡೆಯಾಗಲಿದ್ದು, ನಾಯಕತ್ವಕ್ಕೆ ಮರಳಲಿದ್ದಾರೆ.
ಹ್ಯಾಮ್ಸ್ಟ್ರಿಂಗ್ ಗಾಯದ ಕಾರಣ ದಕ್ಷಿಣ ಆಫ್ರಿಕಾ ಪ್ರವಾಸ ತಪ್ಪಿಸಿಕೊಂಡಿದ್ದ ರೋಹಿತ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಇದೀಗ ಸಂಪೂರ್ಣ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಬುಧವಾರ ಆಯ್ಕೆ ಸಮಿತಿಯನ್ನು ಭೇಟಿ ಮಾಡಲಿದ್ದಾರೆ.
ವಿರಾಟ್ ಕೊಹ್ಲಿ ಟಿ20 ನಾಯಕತ್ವ ತ್ಯಜಿಸಿದ ಬೆನ್ನಲ್ಲೇ, ಏಕದಿನ ತಂಡದ ನಾಯಕತ್ವದಿಂದಲೂ ವಜಾಗೊಳಿಸಿ ರೋಹಿತ್ ಶರ್ಮಾಗೆ ಸೀಮಿತ ಓವರ್‌ಗಳ ತಂಡದ ನಾಯಕತ್ವ ನೀಡಲಾಗಿತ್ತು.
ಆದರೆ, ರೋಹಿತ್ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಗಾಯಕ್ಕೊಳಗಾಗಿದ್ದರಿಂದ ಕೆ ಎಲ್ ರಾಹುಲ್ ಹರಿಣಗಳ ವಿರುದ್ಧ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರು. ಆದರೆ, ಟೀಮ್ ಇಂಡಿಯಾ 0-3ರಲ್ಲಿ ಸೋಲನುಭವಿಸಿತ್ತು.
ಇದನ್ನೂ ಓದಿ:ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಶಾರುಖ್ ಖಾನ್, ರಿಷಿ ಧವನ್ಗೆ ಅವಕಾಶ ಸಾಧ್ಯತೆ
ಇದೀಗ ತವರಿನಲ್ಲಿ ಫೆಬ್ರವರಿ 6ರಿಂದ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಇದು ರೋಹಿತ್ ನಾಯಕನಾಗಿ ಮೊದಲ ಏಕದಿನ ಸರಣಿಯಾಗಲಿದೆ.
ಈ ಸರಣಿಗೆ ಹಾರ್ದಿಕ್ ಪಾಂಡ್ಯರ ಆಯ್ಕೆ ಇನ್ನೂ ಖಚಿತವಾಗಿಲ್ಲ. ಟಿ20 ವಿಶ್ವಕಪ್ನ ಕಳಪೆ ಪ್ರದರ್ಶನದ ಬಳಿಕ ಅವರನ್ನು ತಂಡದಿಂದ ಕೈಬಿಟ್ಟು, ಬೌಲಿಂಗ್ ಕಡೆ ಗಮನ ಹರಿಸಲು ಆಯ್ಕೆ ಸಮಿತಿ ಎಚ್ಚರಿಕೆ ನೀಡಿದೆ. ಅವರ ಜಾಗಕ್ಕೆ ಅನಾನುಭವಿ ವೆಂಕಟೇಶ್ ಅಯ್ಯರ್ ಅವಕಾಶ ಪಡೆದರೂ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾಗಿ ನಿರೀಕ್ಷೆಯನ್ನು ಹುಸಿಗೊಳಿಸಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ