ಹೈದರಾಬಾದ್ : ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಟೆಸ್ಟ್ ಪಂದ್ಯಕ್ಕೆ ಪದಾರ್ಪಣೆ ಮಾಡಿರುವ ಮ್ಯಾಚ್ನಲ್ಲೇ ಈ ಸಾಧನೆ ಮಾಡಿರುವ ಶ್ರೇಯಸ್ ಅವರ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಶತಕ ಸಾಧನೆ ಬೆನ್ನಲ್ಲೇ ತಂಡದ ಸಹ ಆಟಗಾರರಾದ ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್ ಜೊತೆಗೆ ಈ ಹಿಂದೆ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ರೋಹಿತ್ ಶರ್ಮಾ ತಮ್ಮ ಇನ್ಸ್ಟಾಗ್ರಾಂ ಅಕೌಂಟ್ನಿಂದ ಈ ವಿಡಿಯೋ ತುಣುಕು ಶೇರ್ ಮಾಡಿದ್ದಾರೆ.
ಅದರಲ್ಲಿ ಅಯ್ಯರ್, ಶಾರ್ದೂಲ್ ಹಾಗೂ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಡ್ಯಾನ್ಸ್ ಮಾಡ್ತಿದ್ದಾರೆ. ಈ ಮೂವರು ಪ್ಲೇಯರ್ಸ್ ಅನೇಕ ವರ್ಷಗಳ ಕಾಲ ಒಟ್ಟಾಗಿ ಮಹಾರಾಷ್ಟ್ರ ತಂಡಕ್ಕಾಗಿ ಕ್ರಿಕೆಟ್ ಆಡಿದ್ದಾರೆ.
- " class="align-text-top noRightClick twitterSection" data="
">
ಕಳೆದ ಏಪ್ರಿಲ್ ತಿಂಗಳಲ್ಲಿ ಭುಜದ ನೋವಿನಿಂದಾಗಿ ಟೀಂ ಇಂಡಿಯಾದಿಂದ ಹೊರ ಬಿದ್ದಿದ್ದ ಶ್ರೇಯಸ್ ಅಯ್ಯರ್, ಇದೀಗ ಭರ್ಜರಿಯಾಗಿ ಕಮ್ಬ್ಯಾಕ್ ಮಾಡಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಸಾಧನೆ ಮಾಡುತ್ತಿದ್ದಂತೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಸೇರಿದಂತೆ ಅನೇಕರು ಅವರಿಗೆ ಮೆಚ್ಚುಗೆ ಸೂಚಿಸಿದ್ದಾರೆ.
ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಟೀಂ ಇಂಡಿಯಾ ಪರ ಶತಕ ಸಿಡಿಸಿರುವ 16ನೇ ಭಾರತೀಯ ಪ್ಲೇಯರ್ ಎಂಬ ಸಾಧನೆಗೂ ಇದೀಗ ಅಯ್ಯರ್ ಪಾತ್ರರಾಗಿದ್ದಾರೆ. ಈ ಹಿಂದೆ 2013ರಲ್ಲಿ ರೋಹಿತ್ ಶರ್ಮಾ ಹಾಗೂ 2018ರಲ್ಲಿ ಪೃಥ್ವಿ ಶಾ ಈ ಸಾಧನೆ ಮಾಡಿದ್ದಾರೆ.