ಹೈದರಾಬಾದ್: ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯಿಂದ ಕೆಎಲ್ ರಾಹುಲ್ ಹೊರಬಿದ್ದಿದ್ದು, ಅವರ ಜಾಗಕ್ಕೆ ಮಧ್ಯಮ ಕ್ರಮಾಂಕದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ಮಂಡಳಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ.
2022ರ ಐಪಿಎಲ್ ಟೂರ್ನಿ ನಂತರ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ರಾಹುಲ್, ಕಳೆದ ಕೆಲ ವಾರಗಳ ಹಿಂದೆ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದುಕೊಳ್ಳುತ್ತಿದ್ದರು. ಇದರ ಬೆನ್ನಲ್ಲೇ ಅವರಿಗೆ ಕೋವಿಡ್ ಕಾಣಿಸಿಕೊಂಡಿತ್ತು. ಹೀಗಾಗಿ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹೊರ ಬಿದ್ದಿದ್ದಾರೆ.
-
All Set For The T20Is! 🙌
— BCCI (@BCCI) July 28, 2022 " class="align-text-top noRightClick twitterSection" data="
ARE YOU READY❓#TeamIndia | #WIvIND pic.twitter.com/oWjEKyUdac
">All Set For The T20Is! 🙌
— BCCI (@BCCI) July 28, 2022
ARE YOU READY❓#TeamIndia | #WIvIND pic.twitter.com/oWjEKyUdacAll Set For The T20Is! 🙌
— BCCI (@BCCI) July 28, 2022
ARE YOU READY❓#TeamIndia | #WIvIND pic.twitter.com/oWjEKyUdac
ಹೀಗಾಗಿ, ಕೇರಳದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಇತ್ತೀಚಿಗೆ ವೆಸ್ಟ್ ಇಂಡೀಸ್ ವಿರುದ್ಧ ಮುಕ್ತಾಯಗೊಂಡ ಏಕದಿನ ಕ್ರಿಕೆಟ್ನಲ್ಲಿ ಸ್ಯಾಮ್ಸನ್ ಉತ್ತಮ ಪ್ರದರ್ಶನ ನೀಡಿದ್ದರು. ಜೊತೆಗೆ ಒಂದು ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದರು.
ಇದೀಗ ಚಾನ್ಸ್ ಪಡೆದುಕೊಂಡಿರುವ ಸಂಜು ಸ್ಯಾಮ್ಸನ್ ಆಡುವ 11ರ ಬಳಗದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಡೌಟ್. ವಿಕೆಟ್‌ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್, ಇಶಾನ್ ಕಿಶನ್ ಮತ್ತು ದಿನೇಶ್ ಕಾರ್ತಿಕ್ ಇದ್ದು, ಹೀಗಾಗಿ, ಸ್ಯಾಮ್ಸನ್ ಅವಕಾಶ ಪಡೆದುಕೊಳ್ಳುವ ಸಾಧ್ಯತೆ ಇದೆ. ಕೋವಿಡ್ನಿಂದ ಚೇತರಿಸಿಕೊಳ್ಳುತ್ತಿರುವ ರಾಹುಲ್ ಆಗಸ್ಟ್ ತಿಂಗಳಲ್ಲಿ ಜಿಂಬಾಬ್ವೆ ವಿರುದ್ಧ ನಡೆಯುವ ಸೀಮಿತ ಓವರ್ಗಳ ಕ್ರಿಕೆಟ್ ಸರಣಿಗೆ ತಂಡ ಸೇರಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಜೊತೆಗೆ ಟೀಂ ಇಂಡಿಯಾ ಮುನ್ನಡೆಸುವ ನಿರೀಕ್ಷೆ ಇದೆ.
-
Sound 🔛 🔊#TeamIndia captain @ImRo45 warming up in the nets ahead of the 1st #WIvIND T20I. 👌 👌 pic.twitter.com/0V5A70l2EY
— BCCI (@BCCI) July 29, 2022 " class="align-text-top noRightClick twitterSection" data="
">Sound 🔛 🔊#TeamIndia captain @ImRo45 warming up in the nets ahead of the 1st #WIvIND T20I. 👌 👌 pic.twitter.com/0V5A70l2EY
— BCCI (@BCCI) July 29, 2022Sound 🔛 🔊#TeamIndia captain @ImRo45 warming up in the nets ahead of the 1st #WIvIND T20I. 👌 👌 pic.twitter.com/0V5A70l2EY
— BCCI (@BCCI) July 29, 2022
ಇದನ್ನೂ ಓದಿರಿ: IND vs WI T20I: ಶುಭಾರಂಭದ ತವಕದಲ್ಲಿ ರೋಹಿತ್ ಬಳಗ..ಯಾರಿಗೆಲ್ಲ ಚಾನ್ಸ್?
ಟೀಂ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್, ಬ್ಯಾಟರ್), ಸೂರ್ಯಕುಮಾರ್ ಯಾದವ್, ದೀಪಕ್ ಹೂಡ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್(ವಿ,ಕೀ), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಆರ್ ಅಶ್ವಿನ್, ರವಿ ಬಿಷ್ಣೋಯ್, ಕುಲ್‌ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್