ಬ್ರಿಸ್ಟೋಲ್: ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ನಡೆಯುತ್ತಿರವ ಏಕೈಕ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ತಂಡಕ್ಕೆ ಭಾರತ ವನಿತೆಯರ ತಂಡ ತಕ್ಕ ಪ್ರತ್ಯುತ್ತರ ನೀಡಿದೆ. ಆದರೆ ಆರಂಭಿಕರಾಗಿ ಕಣಕ್ಕಿಳಿದಿದ್ದ ಶೆಫಾಲಿ ವರ್ಮಾ ಪದಾರ್ಪಣೆ ಪಂದ್ಯದಲ್ಲೇ ಶತಕ ದಾಖಲಿಸುವ ಅವಕಾಶವನ್ನು ಕೇವಲ 4 ರನ್ಗಳಿಂದ ತಪ್ಪಿಸಿಕೊಂಡು ನಿರಾಸೆ ಅನುಭವಿಸಿದ್ದಾರೆ.
ಮೊದಲು ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ 9 ವಿಕೆಟ್ ಕಳೆದುಕೊಂಡು 396 ರನ್ಗಳಿಸಿದ್ದ ವೇಳೆ ಡಿಕ್ಲೇರ್ ಘೋಷಿಸಿಕೊಂಡಿತು. ನಾಯಕಿ ಹೀದರ್ ನೈಟ್ 95, ಸೋಫಿಯಾ ಡಂಕ್ಲೇ 74 ಹಾಗೂ ಟಮ್ಮಿ ಬ್ಯೂಮಾಂಟ್ 66 ರನ್ಗಳಿಸಿದರು.
ಭಾರತದ ಪರ 5 ವರ್ಷದ ನಂತರ ಭಾರತ ತಂಡಕ್ಕೆ ಮರಳಿ ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಸ್ನೇಹ್ ರಾಣಾ, 4 ವಿಕೆಟ್ ಪಡೆದರೆ ದೀಪ್ತಿ ಶರ್ಮಾ 3 ವಿಕೆಟ್ ಪಡೆದು ಮಿಂಚಿದರು. ಗೋಸ್ವಾಮಿ ಮತ್ತು ಪೂಜಾ ವಸ್ತ್ರಾಕರ್ ತಲಾ ಒಂದು ವಿಕೆಟ್ ಪಡೆದರು.
ಇನ್ನು ಮೊದಲ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಆರಂಭಿಕರಾದ ಶೆಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಮೊದಲ ವಿಕೆಟ್ಗೆ 167 ರನ್ಗಳ ಜೊತೆಯಾಟ ನೀಡಿದರು.
ಟೆಸ್ಟ್ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಶೆಫಾಲಿ ವರ್ಮಾ ಟೆಸ್ಟ್ ಕ್ರಿಕೆಟ್ನಲ್ಲೂ ತಮ್ಮ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅವರು 152 ಎಸೆತಗಳಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್ಗಳ ಸಹಿತ 96 ರನ್ಗಳಿಸಿದ್ದ ವೇಳೆ ಕೇಟ್ ಕ್ರಾಸ್ ಬೌಲಿಂಗ್ನಲ್ಲಿ ಶ್ರೂಬ್ಸೋಲ್ಗೆ ಕ್ಯಾಚ್ ನೀಡಿ ಔಟಾದರು.
ಇನ್ನು ಶೆಫಾಲಿಗೆ ಬೆಂಬಲ ನೀಡಿದ ಅನುಭವಿ ಸ್ಮೃತಿ ಮಂಧಾನ 142 ಎಸೆತಗಳಲ್ಲಿ 12 ಬೌಂಡರಿ ಸಹಿತ ಅಜೇಯ 66ರನ್ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಇದನ್ನು ಓದಿ:WTC ಫೈನಲ್ಗೆ ಭಾರತ ತಂಡ ಪ್ರಕಟ: ಮೂವರು ವೇಗಿ, ಇಬ್ಬರು ಸ್ಪಿನ್ನರ್ಗಳಿಗೆ ಅವಕಾಶ